ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿ ಜೈಲು ಪಾಲಾಗಿದ್ದ ಬಿಗ್ ಬಾಸ್ ಖ್ಯಾತಿಯ ರಜತ್ ಹಾಗೂ ವಿನಯ್ ಗೌಡ ಸೆರೆಮನೆಯಿಂದ ಕಡೆಗೂ ಬಿಡುಗಡೆಯಾಗಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣದಲ್ಲಿ ರಜತ್ ಮತ್ತು ವಿನಯ್ಗೆ ನಿನ್ನೆ 24ನೇ ಎಸಿಎಂಎಂ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿತ್ತು. ಪೊಲೀಸರ ಕೈಗೆ ಬೇಲ್ ಪ್ರತಿ ತಡವಾಗಿ ಸಿಕ್ಕ ಹಿನ್ನೆಲೆಯಲ್ಲಿ ಇಂದು ರಜತ್ ಹಾಗೂ ವಿನಯ್ ಇಂದು ಬಿಡುಗಡೆಯಾದರು. ಸುದ್ದಿಗಾರರೊಂದಿಗೆ ಮಾತನಾಡಿದ ವಿನಯ್, ಎಲ್ಲರೂ ತುಂಬಾ ಬೆಂಬಲ ನೀಡಿದ್ದಾರೆ ಎಲ್ಲರಿಗೂ ಧನ್ಯವಾದಗಳು ಎಂದು ಚುಟುಕಾಗಿ ಉತ್ತರಿಸಿದರು.
ಲಾಂಗ್ ಹಿಡಿದು ರೀಲ್ಸ್ ಮಾಡಿದ್ದಕ್ಕೆ ಶಸ್ತ್ರಾಸ್ತ್ರ ಕಾಯ್ದೆಯಡಿ ರಜತ್, ವಿನಯ್ರನ್ನು ಬಂಧಿಸಲಾಗಿತ್ತು. ಮಾ.26ರಿಂದ ಮಾ.28ರವರೆಗೆ 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕೋರ್ಟ್ ಆದೇಶ ನೀಡಿತ್ತು. ನಿನ್ನೆ ಇಬ್ಬರಿಗೂ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
ರಜತ್ ದರ್ಶನ್ ನಟನೆಯ ‘ಕರಿಯ’ ಸಿನಿಮಾ ಲುಕ್ನಲ್ಲಿ ಕಾಣಿಸಿಕೊಂಡಿದ್ದರೆ, ವಿನಯ್ ಪುಷ್ಪರಾಜ್ ಲುಕ್ನಲ್ಲಿ ಮಚ್ಚು ಹಿಡಿದು ಇಬ್ಬರು ರೀಲ್ಸ್ ಮಾಡಿ ಕಾನೂನು ಸಂಕಷ್ಟಕ್ಕೆ ಸಿಲುಕಿ ಇದೀಗ ಬಿಡುಗಡೆಯಾಗಿದ್ದಾರೆ.




