ಬೆಂಗಳೂರು: ನಿವೇಶನ ಹಂಚಿಕೆ ಅಕ್ರಮ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ ಕ್ರಮ ಪ್ರಶ್ನಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಯುತ್ತಿದ್ದರೆ ಇತ್ತ ಕಾಂಗ್ರೆಸ್ ಶಾಸಕರು, ಸಚಿವರು ಮತ್ತು ಸಂಸದರು ಸಿದ್ದರಾಮಯ್ಯ ಪರವಾಗಿ ಒಗ್ಗಟ್ಟು ಪ್ರದರ್ಶಿಸಿದರು.
- ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ: ಡಾ. ಎ ಆರ್ ಗೋವಿಂದಸ್ವಾಮಿ
- ಸಂವಿಧಾನ ಪೀಠಿಕೆ ದೇಶದ ಆತ್ಮವಿದ್ದಂತೆ: ಆದಿತ್ಯ ಚಟರ್ಜಿ
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
ಡಿಸಿಎಂ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಮುಂದೆ ಸಮಾವೇಶಗೊಂಡು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ಬೆಂಬಲಕ್ಕೆ ನಿಲ್ಲುವ ಘೋಷಣೆ ಮಾಡಿದರು.
ನಿವೇಶನ ಹಂಚಿಕೆ ಅಕ್ರಮ ಆರೋಪದಲ್ಲಿ ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲರು ತಮ್ಮ ಮುಂದೆ ತನಿಖೆಗೆ ಅನುಮತಿ ನೀಡುವಂತೆ ಕೋರಿ ಸಲ್ಲಿಸಲಾಗಿರುವ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ಮಾಜಿ ಸಚಿವರಾದ ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ಮತ್ತು ಜನಾರ್ದನ ರೆಡ್ಡಿ ವಿರುದ್ಧ ತನಿಖೆಗೆ ಅನುಮತಿ ನೀಡಿಲ್ಲ ಎಂದು ಪ್ರತಿಭಟನೆಕಾರರು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಶಾಸಕರು ಮತ್ತು ಹಿರಿಯ ನಾಯಕರು ನಡೆಸುತ್ತಿದ್ದ ಧರಣಿಯಲ್ಲಿ ಸಿದ್ದರಾಮಯ್ಯ ಕೂಡ ಪಾಲ್ಗೊಂಡರು.
ಪ್ರತಿಭಟನಾಕಾರರು ಬಿಜೆಪಿ ವಿರುದ್ಧ ಘೋಷಣೆ ಮೊಳಗಿಸಿದರು. ರಾಜ್ಯದಲ್ಲಿನ ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜಭವನವನ್ನು ದುರ್ಬಳಕೆ ಮಾಡಲಾಗುತ್ತಿದೆ ಎಂದು ದೂರಿದರು. ರಾಜ್ಯಪಾಲರು ತನಿಖೆಗೆ ಅನುಮತಿ ನೀಡುವ ವಿಚಾರದಲ್ಲಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಆನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊರತುಪಡಿಸಿ ಉಳಿದ ಎಲ್ಲಾ ನಾಯಕರು ಮೆರವಣಿಗೆಯಲ್ಲಿ ರಾಜಭವನದತ್ತ ತೆರಳಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ನಾವು ಸಿದ್ದರಾಮಯ್ಯ ಪರವಾಗಿ ರಾಜಭವನ ಚಲೊ ಮಾಡುತ್ತಿಲ್ಲ. ರಾಜ್ಯಪಾಲರ ಆದೇಶದ ವಿರುದ್ಧ ನ್ಯಾಯಾಲಯದಲ್ಲಿ ಹೋರಾಟ ನಡೆಸುತ್ತಿದ್ದೇವೆ. ರಾಜ್ಯಪಾಲರ ಕಚೇರಿ ದುರಪಯೋಗ ಆಗುತ್ತಿದೆ. ಅದರ ವಿರುದ್ಧ ನಮ್ಮ ಹೋರಾಟ ಎಂದರು.
ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಕೋರಿದ ಮನವಿಯ ವಿಚಾರದಲ್ಲಿ ಒಂದೇ ದಿನದಲ್ಲಿ ನೋಟಿಸ್ ನೀಡಿರುವುದು ಎಲ್ಲರಿಗೂ ಗೊತ್ತು. ಈ ಹಿಂದೆ ರಾಜ್ಯಪಾಲರ ಬಳಿ ಹಲವರ ಕಡತ ಹೋಗಿದೆ. ರಾಜ್ಯಪಾಲರು ಸರ್ಕಾರದ ಪ್ರತಿನಿಧಿ ಆಗಿ ಕೆಲಸ ಮಾಡಬೇಕು. ಪಕ್ಷದ ಪ್ರತಿನಿಧಿಯಾಗಿ ಕೆಲಸ ಮಾಡಬಾರದು ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸಚಿವರು, ಶಾಸಕರು, ಕಾಂಗ್ರೆಸ್ ಮುಖಂಡರು ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಅನುಮತಿ ನೀಡಿರುವಂತೆ ಬಿಜೆಪಿ, ಜೆಡಿಎಸ್ ನಾಯಕರ ಮೇಲಿನ ಪ್ರಕರಣಗಳಲ್ಲೂ ವಿಚಾರಣೆಗೆ ಅನುಮತಿ ನೀಡುವಂತೆ ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಡಿ.ಕೆ. ಶಿವಕುಮಾರ್, ಯಾರೊ ದೂರು ಕೊಟ್ಟರೆಂದು ಮುಖ್ಯಮಂತ್ರಿ ವಿರುದ್ದ ತನಿಖೆಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ. ಆದರೆ, ಬಿಜೆಪಿ- ಜೆಡಿಎಸ್ ನಾಯಕರ ವಿರುದ್ದ ಪ್ರಾಸಿಕ್ಯೂಷನ್‌ಗೆ ಅವರು ಅನುಮತಿ ಕೊಡುತ್ತಿಲ್ಲ. ರಾಜಭವನ ರಾಜಕೀಯ ಭವನ ಆಗಬಾರದು. ಸಂವಿಧಾನದಡಿ ರಚನೆಯಾದ ಪೀಠ ರಾಜ್ಯಪಾಲರದ್ದು. ಇಂತಹ ರಾಜ್ಯಪಾಲರಿಂದ ಪ್ರಜಾಪ್ರಭುತ್ವದ ಕಗ್ಗೊಲೆ ಆಗಬಾರದು. ನ್ಯಾಯಸಮ್ಮತವಾಗಿ ಈ ನಾಲ್ವರ ವಿರುದ್ಧ ಪ್ರಾಸಿಕ್ಯೂಷನ್ ಕೊಡಿ ಎಂದು ಮನವಿ ಮಾಡಿದ್ದೇವೆ ಎಂದರು.
ನಮ್ಮ ಮನವಿ ಆಲಿಸಿದ ರಾಜ್ಯಪಾಲರು, ಎಚ್.ಡಿ. ಕುಮಾರಸ್ವಾಮಿ, ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ, ನಿರಾಣಿ ಮೇಲಿನ ಪ್ರಾಸಿಕ್ಯೂಷನ್ ಅರ್ಜಿ ಸಂಬಂಧ ನಮ್ಮ ಬಳಿ ಏನೂ ಇಲ್ಲ. ಎಲ್ಲ ವಿಲೇವಾರಿ ಮಾಡಿದ್ದೇವೆಂದು ಹೇಳಿದರು. ರಾಜ್ಯಪಾಲರು ಮಾತನಾಡಿದ್ದನ್ನೆಲ್ಲಾ ಹೇಳಲು ಆಗುವುದಿಲ್ಲ. ಆದರೆ, ನಮ್ಮ ಕಚೇರಿಯಲ್ಲಿ ಆ ದಾಖಲೆಗಳಿಲ್ಲ ಅಂದಿದ್ದಾರೆ. ಇದರ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದೂ ಹೇಳಿದ್ದಾರೆ ಎಂದರು.
ರಾಜ್ಯಪಾಲರ ಜೊತೆ ಏನು ಮಾತನಾಡಿದ್ದೇವೆ ಎಂಬುದನ್ನು ಎಲ್ಲವನ್ನೂ ಹೇಳುವುದಕ್ಕೆ ಆಗುವುದಿಲ್ಲ. ರಾಜ್ಯಪಾಲರ ಹುದ್ದೆ, ರಾಜಭವನದ ಗೌರವ ಕಾಪಾಡಬೇಕೆಂದು ಮನವಿ ಮಾಡಿದ್ದೇವೆ ಎಂದರು.


