ಬೆಂಗಳೂರು: ಬೆಂಗಳೂರು ಕೆಪಿಸಿಸಿ ಕಛೇರಿಗೆ ರಾಜೀವ್ ಗಾಂಧಿ ಜ್ಯೋತಿ ಯಾತ್ರೆ ಆಗಮಿಸಿತು. ಈ ಕಾರ್ಯಕ್ರಮದಲ್ಲಿ ರಾಜೀವ್ ಗಾಂಧಿ ಭಾವಚಿತ್ರಕ್ಕೆ ರಾಜ್ಯಸಭಾ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಜ್ಯೋತಿ ಯಾತ್ರೆಗೆ ಚಾಲನೆ ನೀಡಿದರು.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ರಾಜೀವ್ ಗಾಂಧಿ ಜ್ಯೋತಿ ಯಾತ್ರಾ ಸಮಿತಿ ಅಧ್ಯಕ್ಷ ಆರ್.ದೊರೈ, ಉಪಾಧ್ಯಕ್ಷ ರಾಜಣ್ಣ ಅಯ್ಯರ್, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸಪ್ಪ ಮತ್ತು ಕಾರ್ಮಿಕ ವಿಭಾಗದ ಅಧ್ಯಕ್ಷ ಕೆ.ಪುಟ್ಟಸ್ವಾಮಿಗೌಡ, ಇಂಟಕ್ ಅಧ್ಯಕ್ಷ ಲಕ್ಷ್ಮಿವೆಂಕಟೇಶ್, ಮೀನುಗಾರಿಕೆ ಘಟಕದ ಅಧ್ಯಕ್ಷ ಮಂಜುನಾಥ್ ಸುಣಗಾರರವರು ಉಪಸ್ಥಿತರಿದ್ದರು.
ಇದೇ ವೇಳೆ ಮಾತನಾಡಿದ ಜಿ ಸಿ ಚಂದ್ರಶೇಖರ್, ದೇಶದ ಕಿರಿಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ರಾಜೀವ್ ಗಾಂಧಿ ಅವರು ಪ್ರಧಾನಿಯಾಗಿದ್ದ ಅವಧಿಯ ಆಡಳಿತದಲ್ಲಿ ಕೃಷಿ, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ದೇಶದಲ್ಲಿ ಕ್ರಾಂತಿಯಾಯಿತು. ದೇಶ ಅಭಿವೃದ್ದಿಶೀಲ ರಾಷ್ಟ್ರವಾಗಲು ರಾಜೀವ್ ಗಾಂಧಿರವರ ಕೊಡುಗೆ ಅಪಾರ ಎಂದರು.
ರಾಜೀವ್ ಗಾಂಧಿರವರು ಶ್ರೀ ಪೆರಂಬೂರಿನಲ್ಲಿ ಕಾರ್ಯಕ್ರಮದಲ್ಲಿ ಉಗ್ರಗಾಮಿಗಳಿಂದ ಹತ್ಯೆಯಾದರು. ಆಗಸ್ಟ್ 19ರಂದು ರಾಜೀವ್ ಗಾಂಧಿರವರ ಜನ್ಮದಿನಾಚರಣೆ ಪ್ರಯುಕ್ತ ಜ್ಯೋತಿ ಯಾತ್ರೆ ವಿವಿಧ ರಾಜ್ಯಗಳಲ್ಲಿ ಸಾಗಿ ಅಂತಿಮವಾಗಿ ನವದೆಹಲಿ ಸಮಾರೋಪ ನಡೆಯಲಿದೆ. ಶಾಂತಿ, ಸೌಹಾರ್ದತೆ ಸಂಕೇತವಾಗಿ ರಾಜೀವ್ ಗಾಂಧಿ ಜ್ಯೋತಿ ಯಾತ್ರೆ ನಡೆಯಲಿದೆ ಎಂದರು.



