ಬಳ್ಳಾರಿಯಲ್ಲಿ ಡಾ.ರಾಜ್‌ಕುಮಾರ್ ಜನ್ಮದಿನಾಚರಣೆ
ಗಣ್ಯರಿಂದ ಪುಷ್ಪನಮನ
ಬಳ್ಳಾರಿ: ಡಾ.ರಾಜ್‌ಕುಮಾರ್ ಜನ್ಮದಿನಾಚರಣೆ ಅಂಗವಾಗಿ ನಗರದ ಡಾ.ರಾಜ್‌ಕುಮಾರ್ ಉದ್ಯಾನವನದಲ್ಲಿನ ಡಾ.ರಾಜ್ ಕುಮಾರ್ ಅವರ ಪುತ್ಥಳಿಗೆ ಅಧಿಕಾರಿಗಳು, ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಯ ಮಾತನಾಡಿ, ಕನ್ನಡ ನಾಡು-ನುಡಿ, ಭಾಷಾಭಿಮಾನವನ್ನು ರಾಷ್ಟ್ರ ಮಟ್ಟದಲ್ಲಿ ಬೆಳೆಸಲು ತಮ್ಮದೇ ಆದ ನಟನ ಶೈಲಿಯಲ್ಲಿ ಬೆಳ್ಳಿ ಪರದೆ ಮೇಲೆ ಒಲವು ಮೂಡಿಸಿದ ವರನಟ ಡಾ.ರಾಜ್ ಕುಮಾರ್ ಅವರ ಕೊಡುಗೆ ಅಪಾರ ಎಂದರು.
ಡಾ.ರಾಜ್ ಕುಮಾರ್ ಅವರ ಎಲ್ಲಾ ಸಿನಿಮಾಗಳು ಜೀವನದ ಎಲ್ಲಾ ಆಯಾಮಗಳನ್ನು ಪ್ರಸ್ತುತಪಡಿಸುತ್ತಿದ್ದವು. ಬಾಲ್ಯದಲ್ಲಿ ನಾವೆಲ್ಲರೂ ಅವರ ಚಿತ್ರಗಳನ್ನೇ ನೋಡಿಕೊಂಡು ಬೆಳೆದಿದ್ದೇವೆ ಎಂದರು.
ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ಸಿರಿಗೇರಿ ಪನ್ನರಾಜ್ ಮಾತನಾಡಿ, ಡಾ.ರಾಜ್ ಕುಮಾರ್ ಅವರ ಜನ್ಮದಿನಾಚರಣೆಯನ್ನು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಚರಿಸುವಂತೆ ಆದೇಶಿಸಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆ ತಿಳಿಸಿದರು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಪಿ.ಪ್ರಮೋದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕ ವಿ.ಸಿ.ಗುರುರಾಜ, ಕರ್ನಾಟಕ ಯುವ ಸಂಘದ ಅಧ್ಯಕ್ಷ ಬಿ.ಬಸವರಾಜ, ಕರ್ನಾಟಕ ಜನಸೈನ್ಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಕೆ.ಎರ್ರಿಸ್ವಾಮಿ, ಸ್ವಾಮಿ ವಿವೇಕಾನಂದ ಯುವಕ ಸಂಘದ ಅಧ್ಯಕ್ಷ ಪಿ.ಗಾದೆಪ್ಪ, ಮುಖಂಡರಾದ ಚಂದ್ರಶೇಖರ್ ಅಚಾರ್, ರಸೂಲ್ ಸಾಬ್ ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು, ಡಾ.ರಾಜ್ ಕುಮಾರ್ ಅಭಿಮಾನಿಗಳು, ಸಾರ್ವಜನಿಕರು ಹಾಗೂ ಮತ್ತಿತರರು ಹಾಜರಿದ್ದರು ಉಪಸ್ಥಿತರಿದ್ದರು.
ಸಂಜೆ ಕನ್ನಡ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಡಾ.ರಾಜ್‌ಕುಮಾರ್ ಜನ್ಮದಿನಾಚರಣೆ ಅಂಗವಾಗಿ ಇಂದು (ಏ.24 ರಂದು) ಸಂಜೆ 5.30 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಕನ್ನಡ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಡಾ.ರಾಜ್‌ಕುಮಾರ್ ಜನ್ಮದಿನಾಚರಣೆ ಕಾರ್ಯಕ್ರಮ ಕುರಿತು ವಿಶೇಷ ಉಪನ್ಯಾಸ ಮತ್ತು ಕಾರ್ಯಕ್ರಮದಲ್ಲಿ ಬಳ್ಳಾರಿಯ ಮಸ್ತಾನ್ ಸೌಂಡ್ಸ್ ನ ಪ್ರತಿಭಾ ಆರ್ಕೆಸ್ಟ್ರಾ ವತಿಯಿಂದ ಕನ್ನಡ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಡಾ.ರಾಜ್ ಕುಮಾರ್ ಅವರ ಅಭಿಮಾನಿಗಳು, ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ ರಾಜಕೀಯ ಮುಖಂಡರು, ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಾಗುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಿದರು.




