ಡಾ. ರಾಜಕುಮಾರ್ ಸಂಸ್ಕೃತಿ ದತ್ತಿ ಪ್ರಶಸ್ತಿ ಪ್ರಧಾನ ಸಮಾರಂಭ

3 years ago

#Rajkumar #Culture #Award #Ceremony #bsarojadevi

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಇಂದು ಸಂಜೆ ೫.೦೦ ಗಂಟೆಗೆ ಡಾ. ರಾಜಕುಮಾರ್ ಸಂಸ್ಕೃತಿ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.


ಖ್ಯಾತ ನಿರ್ಮಾಪಕ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಎಸ್.ಎ. ಚೆನ್ನೇಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ ಜೋಶಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಖ್ಯಾತ ಹಿನ್ನೆಲೆ ಗಾಯಕಿ ಡಾ. ಬಿ.ಕೆ. ಸುಮಿತ್ರಾ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

೨೦೨೩ನೆಯ ಸಾಲಿನ ʻಡಾ. ರಾಜಕಮಾರ್ ಸಂಸ್ಕೃತಿ ದತ್ತಿ ಪ್ರಶಸ್ತಿʼಯನ್ನು ಖ್ಯಾತ ಹಿರಿಯ ಚಲನಚಿತ್ರ ಕಲಾವಿದೆ ಪದ್ಮಭೂಷಣ ಡಾ. ಬಿ. ಸರೋಜಾದೇವಿ ಅವರಿಗೆ ಪ್ರದಾನ ಮಾಡಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply