ಬೆಂಗಳೂರು: ಕೆಎಸ್‌ಆರ್‌ಟಿಸಿಯ 20 ”ಅಂಬಾರಿ ಉತ್ಸವ” ವೋಲ್ವೋ ಸ್ಲೀಪರ್ ಕ್ಲಾಸ್ ಬಸ್‌ಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿಗಮದ ಹುಮ್ನಾಬಾದ್ ತರಬೇತಿ ಕೇಂದ್ರದಲ್ಲಿ ನಡೆಸಲಾದ ಚಾಲನಾ ವೃತ್ತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ 1406 ಅಭ್ಯರ್ಥಿಗಳ ಪೈಕಿ 50 ಅಂಕಗಳಿಗೆ 50/49/48 ಅಂಕ ಪಡೆದಿರುವ 82 ಅಭ್ಯರ್ಥಿಗಳಿಗೆ ಪೈಕಿ 14 ಮಂದಿಗೆ ಚಾಲಕ ಕಂ ನಿರ್ವಾಹಕರ ಹುದ್ದೆಗೆ ತಾತ್ಕಾಲಿಕ ನಿಯೋಜನೆ ಆದೇಶವನ್ನು ವಿತರಿಸಿದರು.
ಅಂಬಾರಿ ಉತ್ಸವ ಬಸ್‌ಗಳು ಬೆಂಗಳೂರಿನಿಂದ ರಾಜ್ಯದ ಪ್ರಮುಖ ನಗರ ಹಾಗೂ ಹೊರ ರಾಜ್ಯಗಳಿಗೆ ಸಂಚಾರ ನಡೆಸಲಿದೆ.
ಹೊಸ ಅಂಬಾರಿ ಉತ್ಸವ ಬಸ್‌ಗಳ ಪ್ರಮುಖ ವಿಶೇಷತೆಗಳು:
• ಈ ಬಸ್ 15 ಮೀಟರ್ ಉದ್ದವಿದ್ದು, 40 ಬರ್ತ್ 2 x 1 ಸೀಟ್ ಸಂರಚನೆಯೊಂದಿದೆ.
• ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣವನ್ನು ನೀಡುತ್ತದೆ.
• ಶಕ್ತಿಯುತ ಹಾಲೋಜನ್ ಹೆಡ್ ಲೈಟ್‌ಗಳು ಮತ್ತು ಡೇ ಟೈಮ್ ರನ್ನಿಂಗ್ ಲೈಟ್ ಗಳನ್ನು (DRL) ಹೊಂದಿದೆ.
• ವಿನ್ಯಾಸವು ಉತ್ತಮ ಇಂಧನ ದಕ್ಷತೆಯನ್ನು ಒದಗಿಸುತ್ತದೆ. ನೂತನ ಆವಿಷ್ಕಾರದ ಎಂಜಿನ್ ತಂತ್ರಜ್ಞಾನವು ಶ್ರೇಷ್ಠ ಕಾರ್ಯಕ್ಷಮತೆಯನ್ನು ಮತ್ತು ಸುಧಾರಿತ ಇಂಧನ ದಕ್ಷತೆಯನ್ನು (KMPL) ಒದಗಿಸುತ್ತದೆ.
• ಚಾಲಕರ ದೃಶ್ಯಾವಧಿಯನ್ನು ಸುಧಾರಿಸಲು ಮತ್ತು ಬ್ಲೈಂಡ್ ಸ್ಪಾಟ್ ಕಡಿಮೆ ಮಾಡಲು ಮುಂಭಾಗದ ಗಾಜು 9.5% ಅಗಲವಾಗಿದೆ.
• ಮೊಬೈಲ್ ಚಾರ್ಜಿಂಗ್ ಪಾಯಿಂಟ್‌ಗಳು ಯು.ಎಸ್.ಬಿ ಮತ್ತು C-ಟೈಪ್ ಎರಡೂ ಮಾದರಿಲ್ಲಿ ಇವೆ.
• ದೊಡ್ಡ ಏರ್ ಡಕ್ಟ್ ಹೊಂದಿರುವುದರಿಂದ ಹೆಚ್ಚಿನ ಏರ್ ಕಂಡೀಷನಿಂಗ್ ವ್ಯವಸ್ಥೆ ಇದೆ. ಇದರಿಂದಾಗಿ ಪ್ರಯಾಣಿಕರಿಗೆ ಪ್ರೀಮಿಯಂ ಅನುಭವ ಮತ್ತು ಉತ್ತಮ ಆಸನಗಳು ಮತ್ತು ಉತ್ತಮ ಗುಣಮಟ್ಟದ ವಸ್ತುಗಳಿಂದ ಅನುಕೂಲ ಸಿಗಲಿದೆ.
• ಪ್ಯಾಂಟೊಗ್ರಾಫಿಕ್ ವಿನ್ಯಾಸವು ವಾಹನ ನಿರ್ವಹಣೆಯನ್ನು ಸುಲಭಗೊಳಿಸುತ್ತದೆ.
• ರಾತ್ರಿ ಸಮಯದಲ್ಲಿ ಚಾಲನೆ ಮಾಡುವಾಗ ಹೆಚ್ಚಿನ ಸುರಕ್ಷತೆಗಾಗಿ ಹಿಂಬದಿ ಫಾಗ್ ಲೈಟ್‌ಗಳು.
• ಚಾಲಕರ ಅನುಕೂಲತೆಗಾಗಿ ಸುಲಭವಾಗಿ ಕೈಗೆಟುಕುವ ನಿಯಂತ್ರಕಗಳು ಮತ್ತು ಸ್ವಿಚ್‌ಗಳನ್ನು ಹೊಂದಿವೆ.
• ತುರ್ತು ಪರಿಸ್ಥಿತಿಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಫೈರ್ ಅಲಾರ್ಮ್ ಮತ್ತು ಪ್ರೊಟೆಕ್ಷನ್ ಸಿಸ್ಟಮ್ (FDSS) ಸ್ಥಾಪಿಸಲಾಗಿದೆ.
• ಚಾಲಕರು ಪ್ರಯಾಣಿಕರ ಬಾಗಿಲಿನಿಂದ ಪಾದಚಾರಿಗಳನ್ನು ಸುಲಭವಾಗಿ ನೋಡಬಹುದು. ಇದು ಪಾದಚಾರಿ ಸುರಕ್ಷತೆಗೆ ನೆರವಾಗಲಿದೆ.
ಸಚಿವ ದಿನೇಶ್ ಗುಂಡೂರಾವ್, ನಿಗಮದ ಅಧ್ಯಕ್ಷರಾದ ಎಸ್.ಆರ್ ಶ್ರೀನಿವಾಸ್, ಉಪಾಧ್ಯಕ್ಷ ಮೊಹಮದ್ ರಿಜ್ವಾನ್ ನವಾಬ್, ಎಂಡಿ ಅನ್ಬು ಕುಮಾರ್, ಡಾ. ಲತಾ, ಇತರೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.








