ಬೆಂಗಳೂರು: ಕರ್ನಾಟಕ ರಾಜ್ಯ ಮುಜರಾಯಿ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ನೌಕರರ ಸಂಘದ ವತಿಯಿಂದ ಚಾಮರಾಜಪೇಟೆಯಲ್ಲಿ ಹಮ್ಮಿಕೊಳ್ಳಲಾಗಿದ್ದ “ರಾಜ್ಯ ಮಟ್ಟದ ಮುಜರಾಯಿ ಅರ್ಚಕರ ವಿಚಾರ ಸಂಕಿರಣ ಸಮಾರಂಭ”ವನ್ನು ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಿದರು.

ಇದೇ ವೇಳೆ ಅವರು ಅರ್ಚಕರಿಗೆ ಸಂಬಂಧಪಟ್ಟ ಕುಂದುಕೊರತೆಗಳನ್ನು ಆಲಿಸಿ, ಅನೇಕ ವಿಚಾರಗಳ ಕುರಿತು ಚರ್ಚೆ ನಡೆಸಿದರು.

ಕಂದಾಯ ಇಲಾಖೆ (ಮುಜರಾಯಿ) ಪ್ರಧಾನ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಠಾರಿಯಾ, ಮುಜರಾಯಿ ಇಲಾಖೆ ಆಯುಕ್ತ ಎಚ್. ಬಸವರಾಜೇಂದ್ರ, ಹಿರಿಯ ಮುಖಂಡರಾದ ಕೆ.ಎಂ ನಾಗರಾಜ್, ಶ್ರೀವತ್ಸ, ರಾಮತೀರ್ಥನ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.





