ಲಾರಿ ಮುಷ್ಕರ ಅಂತ್ಯಗೊಳಿಸಿದ ರಾಮಲಿಂಗಾರೆಡ್ಡಿ ಮಾತುಕತೆ

1 year ago

ಲಾರಿ ಮುಷ್ಕರ ಅಂತ್ಯಗೊಳಿಸಿದ ರಾಮಲಿಂಗಾರೆಡ್ಡಿ ಮಾತುಕತೆ

ಬೆಂಗಳೂರು: ಡೀಸೆಲ್‌ ಬೆಲೆ ಏರಿಕೆ ವಾಪಸ್ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಲಾರಿ ಮುಷ್ಕರ ಅಂತ್ಯಗೊಂಡಿದೆ.
ಮುಷ್ಕರ ನಿರತ ಲಾರಿ ಮಾಲೀಕರ ಸಂಘದ ಪ್ರತಿನಿಧಿಗಳೊಂದಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತುಕತೆ ನಡೆಸಿ ಅವರ ಹಲವು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಮುಷ್ಕರ ವಾಪಸ್ ಪಡೆದಿರುವುದಾಗಿ ಸಂಘಟನೆಗಳ ಮುಖಂಡರು ತಿಳಿಸಿದ್ದಾರೆ.

ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಪ್ರತಿಕ್ರಿಯಿಸಿ, ನಾಲ್ಕು ಪ್ರಮುಖ ಬೇಡಿಕೆ ಇತ್ತು. ಬಾರ್ಡರ್ ಚೆಕ್‌ಪೋಸ್ಟ್ ಸಮಸ್ಯೆಯನ್ನು 3 ತಿಂಗಳಲ್ಲಿ ಬಗೆಹರಿಸುವ ಭರವಸೆ ನೀಡಿದ್ದಾರೆ. ಡಿಸೇಲ್ ದರ 2023ರಲ್ಲಿ ಯದ್ವಾತದ್ವಾ ಏರಿಕೆ ಮಾಡಿದ್ದರು. ಇದನ್ನು ಇನ್ನೊಂದು ಬಾರಿ ಅಧ್ಯಯನ ಮಾಡುವುದಾಗಿ ಹೇಳಿದ್ದಾರೆ. 20 ವರ್ಷಗಳಲ್ಲಿ ಈಡೇರದ ಬೇಡಿಕೆ ಸಚಿವ ರಾಮಲಿಂಗಾ ರೆಡ್ಡಿ ಈಡೇರಿಸಿದ್ದಾರೆ ಎಂದರು.

ಲಾರಿ ಮುಷ್ಕರದಿಂದ ಆದ ತೊಂದರೆಗೆ ಜನರಲ್ಲಿ ವಿಷಾದ ವ್ಯಕ್ತಪಡಿಸಿದ್ದೇನೆ. ಸರ್ಕಾರಕ್ಕೆ ಧನ್ಯವಾದ ಹೇಳುತ್ತೇನೆ. ಒಂದು ದಿನದ ಲಾರಿ ಮುಷ್ಕರದಿಂದ 4500 ಕೋಟಿ ರುಪಾಯಿ ನಷ್ಟವಾಗಿದೆ. ಅಂದಾಜು ಒಂದು ದಿನಕ್ಕೆ 4500 ಕೋಟಿ ರುಪಾಯಿಯಷ್ಟು ನಷ್ಟ ಉಂಟಾಗಿರಬಹುದು ಎಂದರು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಲಾರಿ ಮಾಲೀಕರ ಸಂಘದ ಪದಾಧಿಕಾರಿಗಳ ಜೊತೆ ಸಭೆ ಮಾಡಿದ್ದೇನೆ. ಲಾರಿ ಮಾಲೀಕರ ಸಂಘದವರು ಪ್ರಮುಖವಾಗಿ 6 ಬೇಡಿಕೆ ಇಟ್ಟಿದ್ದರು. ಗಡಿ ಭಾಗದಲ್ಲಿ ಟೋಲ್ ತೆಗೆಯಲು ಸಭೆಯಲ್ಲಿ ಮನವಿ ಮಾಡಿದರು. ಈ ಬಗ್ಗೆ ಮೂರು ದಿನಗಳ ಬಳಿಕ ವರದಿ ತರಸಿಕೊಳ್ಳುತ್ತೇನೆ. ನೋ ಎಂಟ್ರಿ ಬೋರ್ಡ್ ಬದಲಾವಣೆ ಕುರಿತು ಚರ್ಚೆ ಮಾಡುತ್ತೇನೆ. ಲಾರಿ ಮಾಲೀಕರಿಗೆ ವಿಧಿಸುವ ದಂಡ ಕಡಿತ ಮಾಡುವ ಬಗ್ಗೆ ಚರ್ಚೆ ಮಾಡುತ್ತೇನೆ ಎಂದರು.

Ramalingareddy talks end lorry strike

Leave a Reply