ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಕ್ಕೆ ರಾಮಲಿಂಗಾರೆಡ್ಡಿಯವರ ಧೃಡ ಸಂಕಲ್ಪ.
ಕರ್ನಾಟಕ ರಾಜ್ಯದಲ್ಲಿ 2016ರಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಮುಜರಾಯಿ ಇಲಾಖೆಯ ದೇವಾಲಯಗಳಲ್ಲಿ ನಿಷೇಧವನ್ನು ಮಾಡಿ ಆದೇಶವಾಗಿತ್ತು ಆದರೆ ಅದು ಕಾರ್ಯರೂಪಕ್ಕೆ ಬಂದಿರಲಿಲ್ಲ.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ಮುಜರಾಯಿ ಮತ್ತು ಸಾರಿಗೆ ಸಚಿವರಾಗಿರುವ ರಾಮಲಿಂಗಾರೆಡ್ಡಿ ಅವರು ಕರ್ನಾಟಕ ರಾಜ್ಯದ ಎಲ್ಲ ಮುಜರಾಯಿ ದೇವಾಲಯಗಳಲ್ಲಿ ಕಟ್ಟುನಿಟ್ಟಾಗಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಬೇಕೆಂಬ ದೃಢಸಂಕಲ್ಪದೊಂದಿಗೆ ಇದಕ್ಕೆ ಚಾಲನೆಯನ್ನು ನೀಡಿದ್ದಾರೆ. ಇದರ ಪರಿಣಾಮವಾಗಿ ಈಗಾಗಲೇ ದೇವಾಲಯಗಳಲ್ಲಿ ಶೇಕಡ 80ರಷ್ಟು ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ.
ದೇವಾಲಯದ ಸಿಬ್ಬಂದಿ ಭಕ್ತರಿಗೆ ಮತ್ತು ದೇವಾಲಯದ ಆವರಣದಲ್ಲಿ ಪೂಜಾ ಸಾಮಗ್ರಿಗಳನ್ನ ಮಾರುವ ವ್ಯಾಪಾರಸ್ಥರಿಗೂ ಪದೇಪದೇ ಪ್ಲಾಸ್ಟಿಕ್ ಚೀಲಗಳನ್ನ ಬಳಸದಂತೆ ತಿಳಿಸುತ್ತಿದ್ದಾರೆ. ಇದರಿಂದಾಗಿ ಪ್ಲಾಸ್ಟಿಕ್ ಬಳಕೆಯ ನಿಷೇಧದ ರಾಮಲಿಂಗಾರೆಡ್ಡಿಯವರ ದೃಢವಾದಂತಹ ನಿರ್ಣಯಕ್ಕೆ ಸಾರ್ವಜನಿಕರಿಂದಲೂ ಸಹಕಾರ ದೊರೆಯುತ್ತಿರುವುದರಿಂದ ಮುಂದಿನ ದಿನಗಳಲ್ಲಿ ನೂರಕ್ಕೆ ನೂರರಷ್ಟು ಪ್ಲಾಸ್ಟಿಕ್ ಬಳಕೆ ನಿಷೇಧ ಸಾಧ್ಯವಾಗುತ್ತದೆ. ವಿಶ್ವಾಸದಿಂದ ಮತ್ತು ಬದ್ಧತೆಯಿಂದ ಕೆಲಸವನ್ನು ಮಾಡಿದರೆ ಯಾವುದು ಸಾಧಿಸಲು ಅಸಾಧ್ಯವಲ್ಲ ಎಂಬುದನ್ನ ಮಾನ್ಯ ಸಚಿವರು ತೋರಿಸಿ ಕೊಡುತ್ತಿದ್ದಾರೆ.
ಸಚಿವರ ಪರಿಸರ ಕಾಳಜಿ ಮತ್ತು ದೇವಾಲಯಗಳ ಸ್ವಚ್ಛತೆಯ ಬಗ್ಗೆ ಇರುವ ಆಸಕ್ತಿಯ ಕಾರಣದಿಂದ ಈ ಕಾರ್ಯಕ್ರಮ ಪರಿಣಾಮಕಾರಿಯಾಗಿ ಜಾರಿಯಾಗಲು ಸಾಧ್ಯವಾಗುತ್ತಿದೆ.
ದೇವಾಲಯದ ಸಿಬ್ಬಂದಿ ಮತ್ತು ದೇವಾಲಯಗಳಿಗೆ ಬರುವ ಭಕ್ತರು ಸಹ ಈ ವಿಚಾರವನ್ನು ಗಮನದಲ್ಲಿ ಇಟ್ಟುಕೊಂಡು ಮತ್ತಷ್ಟು ರೀತಿಯಲ್ಲಿ ಸಹಕಾರವನ್ನು ನೀಡಿದರೆ ದೇಶದಲ್ಲಿಯೇ ಮೊದಲ ಬಾರಿಗೆ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆಯ ನಿಷೇಧ ಮಾಡಿದಂತಹ ಕೀರ್ತಿಗೂ ಪಾತ್ರರಾಗಬಹುದು. ಈ ನಿಟ್ಟಿನಲ್ಲಿ ಸರ್ಕಾರದ ಜೊತೆ ಸಾರ್ವಜನಿಕರು ಸಹಕರಿಸಬೇಕೆಂದು ಕೋರುತ್ತೇನೆ.
– ಕೆ ಎಸ್ ನಾಗರಾಜ್, ಬೆಂಗಳೂರು



