ಡಿಕೆಶಿ ವಿರುದ್ಧದ ಸಿಡಿ ಪ್ರಕರಣ ಸಿಬಿಐಗೆ ವಹಿಸಲು ರಮೇಶ್ ಜಾರಕಿಹೊಳಿ ಬಿಗಿಪಟ್ಟು

3 years ago

ಬೆಂಗಳೂರು: ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸಮರ ಸಾರಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಮ್ಮ ವಿರುದ್ಧದ ಸಿಡಿ‌ ಪ್ರಕರಣ ಸಿಬಿಐ ತನಿಖೆಗೆ ವಹಿಸುವಂತೆ ಬಿಗಿ ಪಟ್ಟು ಹಿಡಿದಿದ್ದಾರೆ.
ಇದಕ್ಕಾಗಿ ಕಳೆದ ಎರಡು ದಿನಗಳಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಜೊತೆಗೆ  ಚರ್ಚಿಸಿ ಅವರ ಮೂಲಕ ಆದೇಶ ಹೊರಡಿಸಲು ಪ್ರಯತ್ನಿಸಿ ಅದೀಗ ಸಾಧ್ಯವಾಗದ ಹಿನ್ನೆಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಗಾಗಿ ದೆಹಲಿಗೆ ತೆರಳಿದ್ದಾರೆ.
ಇಂದು ಬೆಳಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಮನೆಯಲ್ಲಿ ಭೇಟಿ ಮಾಡಿದ ಜಾರಕಿಹೊಳಿ, ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯಿಸಿದರು. ಆದರೆ ಇದಕ್ಕೂ ಮೊದಲು ಸ್ಥಳೀಯ ಠಾಣೆಯಲ್ಲಿ ದೂರು ದಾಖಲಿಸಲು ಸಿಎಂ ಸಲಹೆ ನೀಡಿದ್ದಾರೆ. ಆದರೆ ಇದಕ್ಕೆ ಸಮ್ಮತಿಸದ ಜಾರಕಿಹೊಳಿ ಸಿಎಂ ನಡೆಯಿಂದ ಅಸಮಾಧಾನಗೊಂಡು ದೆಹಲಿಗೆ ತೆರಳಿದ್ದಾರೆ.
ದೆಹಲಿಯಲ್ಲಿ ಪ್ರಮುಖವಾಗಿ‌ ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ಅವರನ್ನು ರಮೇಶ್‌ ಜಾರಕಿಹೊಳಿ ಭೇಟಿ ಮಾಡಲಿದ್ದಾರೆ. ಶುಕ್ರವಾರ ಬೆಳಗ್ಗೆ ರಾಜ್ಯ ಬಿಜೆಪಿ ಪ್ರಭಾರಿ ಅರುಣ್‌ ಸಿಂಗ್‌ ಅವರನ್ನು ಭೇಟಿ ಮಾಡಲಿದ್ದಾರೆ. ಪ್ರಕರಣವನ್ನು ಸಿಬಿಐಗೆ ವಹಿಸುವ ಕುರಿತು ಇಬ್ಬರನ್ನೂ ಒತ್ತಾಯ ಮಾಡಲಿದ್ದಾರೆ ಎನ್ನಲಾಗಿದೆ.

Leave a Reply