ಬೆಂಗಳೂರು: ಕಳೆದ ಕೆಲವು ದಿನಗಳಿಂದ ಖಾಲಿ ಉಳಿದಿದ್ದ ವಿಧಾನ ಪರಿಷತ್ತಿನ ನಾಲ್ಕು ನಾಮಕರಣ ಸದಸ್ಯ ಸ್ಥಾನಕ್ಕೆ ರಾಜ್ಯ ಸರ್ಕಾರ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.
- ಗಮನ ಬೇರೆಡೆ ಸೆಳೆದು ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ: ಪ್ರಕಾಶ್ ರಾಜ್
- ಪ್ರಜಾಪ್ರಭುತ್ವದಲ್ಲಿ ಪ್ರಧಾನಿಯೂ ವ್ಯಂಗ್ಯಕ್ಕೆ ಅತೀತರಲ್ಲ
- ಹಾಲಿನ ದರ ಏರಿಕೆ ಕುರಿತು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಡಿ ಕೆ ಶಿವಕುಮಾರ್
- ಒಂದು ತಿಂಗಳ ಸಂಬಳವನ್ನು ಬರ ಪರಿಹಾರ ನಿಧಿಗೆ ನೀಡಿ
- ಕಾಮಗಾರಿ ಬಿಲ್ ಪಾವತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ : ಕೃಷ್ಣ ಬೈರೇಗೌಡ
ರಾಜ್ಯ ಕಾಂಗ್ರೆಸ್ ವಕ್ತಾರ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು, ಅನಿವಾಸಿ ಭಾರತೀಯರ ಒಕ್ಕೂಟದ ಉಪಾಧ್ಯಕ್ಷರಾದ ಡಾ. ಆರತಿ ಕೃಷ್ಣ, ದಲಿತ ಹೋರಾಟಗಾರ ಡಿ.ಜಿ. ಸಾಗರ್ ಮತ್ತು ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅವರ ಹೆಸರುಗಳನ್ನು ಹೈಕಮಾಂಡ್ ಅಂತಿಮಗೊಳಿಸಿದೆ.
ಸಿಎಂ ಸಿದ್ದರಾಮಯ್ಯ ರವಾನಿಸಿದ್ದ ಈ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ಅನುಮೋದನೆ ನೀಡಿದ್ದು ಇದೀಗ ರಾಜ್ಯಪಾಲರಿಗೆ ಪಟ್ಟಿ ರವಾನೆಯಾಗಿದೆ.
ಸಮಾಜ ಸೇವೆ, ಶಿಕ್ಷಣ, ಸಹಕಾರ, ಮಾಧ್ಯಮ ಮತ್ತು ಸಾಮಾಜಿಕ ಹೋರಾಟ ಖೋಟಾದಲ್ಲಿ ಈ ನಾಲ್ವರನ್ನು ನಾಮಕರಣ ಮಾಡಲಾಗುತ್ತಿದೆ. ಇದರಲ್ಲಿ ಮೂವರ ಅಧಿಕಾರ ಅವಧಿ ಆರು ವರ್ಷಗಳು ಇರಲಿದೆ. ಉಳಿದ ಒಬ್ಬರ ಅಧಿಕಾರವಧಿ ಕೇವಲ ಒಂಬತ್ತು ತಿಂಗಳು ಮಾತ್ರ ಇದೆ.
ಸಮಾಜಸೇವೆ ಖೋಟಾದಡಿಯಲ್ಲಿ ನಾಮಕರಣ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ ಹಿನ್ನೆಲೆಯಲ್ಲಿ ಅವರ ಸ್ಥಾನ ಖಾಲಿ ಉಳಿದಿತ್ತು. ಆ ಸ್ಥಾನಕ್ಕೆ ನೇಮಕವಾಗುವ ಅಭ್ಯರ್ಥಿಯ ಅವಧಿ ಕೇವಲ ಒಂಬತ್ತು ತಿಂಗಳ ಮಾತ್ರ ಇರಲಿದೆ.
ಉಳಿದ ಮೂವರು ಸದಸ್ಯರ ಅಧಿಕಾರದ ಅವಧಿ ಆರು ವರ್ಷಗಳು ಇರಲಿದೆ. ಈ ನಾಲ್ವರ ನಾಮಕರಣದೊಂದಿಗೆ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಬಹುಮತ ಪಡೆಯಲಿದ್ದು ಪರಿಷತ್ ಸಭಾಪತಿ ಮತ್ತು ಉಪ ಸಭಾಪತಿ ಸ್ಥಾನ ಕೂಡ ಕಾಂಗ್ರೆಸ್ ಪಾಲಾಗಲಿವೆ.




