ಬೆಂಗಳೂರು: ವೈಟ್ ಫೀಲ್ಡ್ ನ ಬ್ರೂಕ್ ಫೀಲ್ಡ್ ನಲ್ಲಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ನಡೆಸಿದ ಬಾಂಬರ್ ಯಾರೆಂಬುದು ಗೊತ್ತಾಗಿದ್ದು, ಅದನ್ನು ದೃಢಪಡಿಸಿಕೊಳ್ಳಬೇಕಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಬರ್ ಯಾರೆಂಬುದು ಬಹುತೇಕ ಪತ್ತೆಯಾಗಿದೆ. ಅದನ್ನು ಸಿಸಿಬಿ, ಎನ್ಐಎ ಅಧಿಕಾರಿಗಳು ಧೃಡಪಡಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಬಾಂಬ್ ಸ್ಪೋಟಿಸಿ ಪರಾರಿಯಾಗಿರುವ ಬಾಂಬರ್ ಯಾರೆಂಬುದು ಎನ್ಐಎನ್ಗೆ ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಎನ್ಐಎ ಅಧಿಕಾರಿಗಳು ಹೈದ್ರಾಬಾದ್ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಈ ಬಾಂಬರ್ಗಾಗಿ ಶೋಧ ನಡೆಸುತ್ತಿದ್ದಾರೆ ಎಂದರು.
ಕಳೆದ ಮಾರ್ಚ್ 1ರಂದು ಮಧ್ಯಾಹ್ನ ಸಂಭವಿಸಿದ್ದ ಬಾಂಬ್ ಸ್ಫೋಟದಲ್ಲಿ ಐದು ಜನ ಗಾಯಗೊಂಡಿದ್ದು,ಮಹಿಳೆಯೊಬ್ಬರು ಕಣ್ಣು ಕಳೆದುಕೊಂಡಿದ್ದರು.




