ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಐವರನ್ನು ಬಂಧಿಸಿದ ಎನ್.ಐ.ಎ.

2 years ago

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ವೈಟ್ಫೀಲ್ಡ್ ಸಮೀಪದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಐವರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ತೀವ್ರಗೊಳಿಸಿದೆ.

ಸ್ಪೋಟ ಕುರಿತಂತೆ ಹಲವು ಮಹತ್ವದ ಮಾಹಿತಿಗಳನ್ನು ಸಂಗ್ರಹಿಸಿರುವ ತಂಡ ಖಚಿತ ಮಾಹಿತಿಯನ್ನು ಆಧರಿಸಿ ಚೆನ್ನೈನ ಸಿದ್ದಾಯಳ್ ಪೇಟೆ ಮತ್ತು ಬಿಡಾರಿಯಾರ್ ಟೆಂಪಲ್ ಬಳಿ ಕೆಲವು ಮನೆಗಳ ಮೇಲೆ ದಾಳಿ ಮಾಡಿ ಐವರನ್ನು ವಶಕ್ಕೆ ಪಡೆದಿದೆ.

ವಶಕ್ಕೆ ಪಡೆದಿರುವ ಇವರನ್ನು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದೆ. ಇವರಲ್ಲಿ ನಾಲ್ವರು ಆರ್.ಟಿ ನಗರದ ಕುಖ್ಯಾತ ಭಯೋತ್ಪಾದಕ ನಜೀರ್ ಎಂಬಾತನ ಜತೆ ಸಂಪರ್ಕ ಹೊಂದಿದವರುವುದು ತನಿಖೆಯಲ್ಲಿ ಪತ್ತೆಯಾಗಿದೆ ಎಂದು ಎನ್ ಐ ಎ ಮೂಲಗಳು ತಿಳಿಸಿವೆ.

ಬೆಂಗಳೂರು ಸೇರಿದಂತೆ ಹಲವಡೆ ವಿದ್ವಂಸಕ ಕೃತ್ಯಕ್ಕೆ ಸಂಚು ಸಂಚುರೂಪಿಸಿ ಹಲವರನ್ನು ತಯಾರುಗೊಳಿಸಿದ ಆರೋಪದ ಮೇಲೆ ಬಂಧಿತನಾಗಿರುವ ನಜೀರ್ ಒಬ್ಬ ಕುಖ್ಯಾತ ಭಯೋತ್ಪಾದಕನಾಗಿದ್ದು, ಜೈಲಿನಲ್ಲೇ ಹಲವರನ್ನು ತನ್ನ ದುಷ್ಕೃತ್ಯದ ಜಾಲಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದಾನೆ.

ಜೈಲಿನಲ್ಲಿರುವ ಈತನನ್ನು ಭೇಟಿಯಾದ ಕೆಲವರ ವಿವರಗಳನ್ನು ಸಂಗ್ರಹಿಸಿದ ಎನ್ಐಎ ತಂಡ ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ಕೀಲಕಾರೈ ಏರಿಯಾ ಬಳಿ ಇರುವ ಷಂಶುದ್ದೀನ್ ಎಂಬಾತನ ಮನೆ ಮೇಲೆ ದಾಳಿ ಮಾಡಿ ಆತನನ್ನು ವಶಕ್ಕೆ ಪಡೆದಿದೆ. ಈತ ನೀಡಿದ ಮಾಹಿತಿ ಆಧರಿಸಿ ಚೆನ್ನೈನಲ್ಲಿ ಐವರನ್ನು ವಶಕ್ಕೆ ಪಡೆಯಲಾಗಿದೆ. ರಾಮೇಶ್ವರಂ ಕೆಫೆ ಸ್ಪೋಟ ಕುರಿತಂತೆ ಹಲವು ಮಹತ್ವದ ಮಾಹಿತಿಗಳನ್ನು ಸಂಗ್ರಹಿಸಿದೆ.

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಭಯೋತ್ಪಾದಕ ನಜೀರ್ ಕ್ರಿಮಿನಲ್ ಪ್ರಕರಣಗಳಲ್ಲಿ ಸಿಲುಕಿ ಜೈಲು ಸೇರುವ ಮುಸ್ಲಿಂ ಯುವಕರನ್ನು ತನ್ನೆಡೆ ಸೆಳೆದು ಅವರ ಬ್ರೇನ್ ವಾಷ್ ಮಾಡಿ, ಅವರು ಜೈಲಿನಿಂದ ಬಿಡುಗಡೆಯಾದ ಬಳಿಕ ಉಗ್ರ ಕೃತ್ಯಗಳಲ್ಲಿ ಭಾಗಿಯಾಗುವಂತೆ ಮಾಡುತ್ತಿದ್ದಾನೆ ಎಂದು ಪೋಲಿಸ್ ಮೂಲಗಳಿಂದ ತಿಳಿದುಬಂದಿದೆ.

ಒಂದು ವರ್ಷದ ಹಿಂದೆ ಆರ್ ಟಿ ನಗರದ ಸುಲ್ತಾನ್ ಪಾಳ್ಯದ ಮನೆಯೊಂದರಲ್ಲಿ ಲೈವ್ ಗ್ರನೇಡ್ , ಪಿಸ್ತೂಲ್ ಸೇರಿ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿತ್ತು. ಆಗ ಸೈಯದ್ ಸೊಹೇಲ್, ಜಾಹಿದ್, ಮುದಾಸಿರ್, ಉಮರ್, ಫೈಜಲ್ ಎಂಬುವರನ್ನು ಗ್ರೆನೇಡ್, ಪಿಸ್ತೂಲ್, ಜೀವಂತ ಗುಂಡುಗಳ ಜೊತೆಗೆ ಬಂಧಿಸಲಾಗಿತ್ತು. ಬಳಿಕ ಏಳು ಪಿಸ್ತೂಲ್, ನಲವತ್ತೈದು ಜೀವಂತ ಗುಂಡುಗಳು, ಹದಿನೈದು ಮೊಬೈಲ್, 20ಕ್ಕೂ ಹೆಚ್ಚು ಸಿಮ್ ಕಾರ್ಡ್, ಒಂದು ಡ್ಯಾಗರ್ ವಶಕ್ಕೆ ಪಡೆಯಲಾಗಿತ್ತು. ಈ ಪ್ರಕರಣವನ್ನು ಮುಂದಿನ ತನಿಖೆಗಾಗಿ ಎನ್ಐಎಗೆ ವರ್ಗಾವಣೆ ಮಾಡಲಾಗಿತ್ತು.

ಆ ಬಳಿಕ ಈ ಎಲ್ಲಾ ಘಟನೆಗಳ ಸೂತ್ರದಾರ ನಜೀರ್ ಎನ್ಐಎ ತಂಡಕ್ಕೆ ಸಿಕ್ಕಿಬಿದ್ದಿದ್ದ. ಕಳೆದ ಫೆ.1ರ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದಲ್ಲೂ ನಜೀರ್ನಿಂದ ಪ್ರೇರಿತರಾದವರೇ ಭಾಗಿಯಾಗಿದ್ದಾರೆ ಎಂಬ ಸಂಶಯವಿದೆ. ಅದರ ಭಾಗವಾಗಿಯೇ ಈಗ ನಜೀರ್ ಜತೆ ಸಂಬಂಧ ಹೊಂದಿರುವ ವ್ಯಕ್ತಿಗಳ ವಿಚಾರಣೆ ನಡೆಯಲಿದೆ. ಪರಪ್ಪನ ಅಗ್ರಹಾರದಲ್ಲಿರುವ ನಜೀರ್ನನ್ನೂ ವಿಚಾರಣೆಗೆ ಒಳಪಡಿಸುವ ಸಾಧ್ಯತೆಗಳಿವೆ.

Leave a Reply