ಬೆಂಗಳೂರು: ವಿದೇಶದಿಂದ ಅಕ್ರಮ ಚಿನ್ನ ಸಾಗಣೆ ಪ್ರಕರಣದಲ್ಲಿ ಬಂಧಿತ ಡಿಜಿಪಿ ರಾಮಚಂದ್ರರಾವ್ ಮಲಮಗಳು ನಟಿ ರನ್ಯಾರಾವ್ ಮತ್ತು ಸಂಗಡಿಗರಿಗೆ 1 ವರ್ಷ ಜೈಲು ವಾಸ ನಿಕ್ಕಿಯಾಗಿದೆ.
ರನ್ಯಾರಾವ್ ವಿರುದ್ಧ ಕಾಫಿಪೋಸಾ ಕಾಯ್ದೆಯನ್ನು ಜಾರಿ ಮಾಡಿರುವುದರಿಂದ ಆಕೆ 1 ವರ್ಷ ಕಾಲ ಜೈಲಿನಲ್ಲೇ ಇರಬೇಕಾದ ಅನಿವಾರ್ಯ ಎದುರಾಗಿದೆ. ರನ್ಯಾರಾವ್ 100 ಕೆಜಿಯಷ್ಟು ಚಿನ್ನವನ್ನು ವಿದೇಶದಿಂದ ಕಳ್ಳ ಸಾಗಾಣೆ ಮಾಡಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ. ಇದರಿಂದ ರನ್ಯಾರಾವ್, ಮತ್ತು ಆಪ್ತರಾದ ತರುಣ್ ಕೊಂಡಾರಾಜ್ ಹಾಗೂ ಸಾಹಿಲ್ ಜೈನ್ ವಿರುದ್ಧ ಕಾಫಿಪೋಸಾ ಕಾಯಿದೆ ಜಾರಿ ಮಾಡಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಕಾಫಿಪೋಸಾ ಎಂದರೆ ವಿದೇಶಿ ವಿನಿಮಯ ನಿಯಂತ್ರಣ ಹಾಗೂ ಕಳ್ಳ ಸಾಗಾಣಿಕೆ ತಡೆ ಕಾಯ್ದೆಯಾಗಿದೆ. ಈ ಕಾಯ್ದೆಯನ್ನು ಕಳ್ಳಸಾಗಣೆ ಮಾಡುವವರ ವಿರುದ್ಧ ಹಾಕಲಾಗುತ್ತದೆ. ಆರೋಪಿ ಜಾಮೀನು ಪಡೆಯಬಾರದು ಎಂಬುದು ಇದರ ಮೂಲ ಉದ್ದೇಶವಾಗಿದೆ.
ಆರೋಪಿ ಜಾಮೀನು ಪಡೆದು ಹೊರಗೆ ಬಂದರೆ ನಿರಂತರವಾಗಿ ಮತ್ತೆ ಕಳ್ಳ ಸಾಗಾಣಿಕೆ ಮಾಡುತ್ತಾರೆ. ಅಲ್ಲದೇ ಜೈಲಿನಿಂದ ಬಂದ ಬಳಿಕ ತಪ್ಪಿಸಿಕೊಳ್ಳಬಹುದು. ತನಿಖೆಗೆ ಸರಿಯಾಗಿ ಸಹಕಾರ ಕೊಡದೇ, ನಿರಂತರವಾಗಿ ಸ್ಮಗ್ಲಿಂಗ್ನಲ್ಲಿ ಮುಂದುವರೆಯುತ್ತಾರೆ ಎಂದು ಕಾಯ್ದೆ ಜಾರಿಗೊಳಿಸಲಾಗುತ್ತದೆ.
ಕಾಫಿಪೋಸಾ ಕಾಯ್ದೆಯನ್ನು ಕೇಂದ್ರ ಆರ್ಥಿಕ ಗುಪ್ತಚರ ಬ್ಯೂರೋ ಜಾರಿ ಮಾಡುತ್ತದೆ.ಈ ಕಾಯ್ದೆಯನ್ನು ಜಾರಿಗೊಳಿಸಿದರೆ ಆರೋಪಿ ಗಳು ಒಂದು ವರ್ಷ ಕಾಲ ಜೈಲಿನಲ್ಲೇ ಇರುವುದು ಕಡ್ಡಾಯವಾಗಿದೆ.




