ಬೆಂಗಳೂರು: ವಿದೇಶದಿಂದ ಅಕ್ರಮವಾಗಿ ಚಿನ್ನ ಕಳ್ಳ ಸಾಗಾಣಿಕೆ ಮಾಡಿದ ಆರೋಪದಲ್ಲಿ ಬಂಧಿಯಾಗಿರುವ ಡಿಜಿಪಿ ರಾಮಚಂದ್ರರಾವ್ ಮಲಮಗಳು ಹಾಗೂ ನಟಿ ರನ್ಯಾರಾವ್ ಗೆ ದುಬಾರಿ ದಂಡ ವಿಧಿಸಲಾಗಿದೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಚಿನ್ನ ಕಳ್ಳ ಸಾಗಾಣಿಕೆ ಮಾಡಿರುವ ಪ್ರಕರಣದಲ್ಲಿ ಒಟ್ಟು 102.55 ಕೋಟಿ ರೂಪಾಯಿ ದಂಡ ಕಟ್ಟುವಂತೆ ನಟಿಗೆ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ನೋಟಿಸ್ ನೀಡಿದೆ. ವಿದೇಶದಿಂದ 127 ಕೆಜಿ ಚಿನ್ನ ಅಕ್ರಮ ಸಾಗಾಟ ಸಾಬೀತಾದ ಹಿನ್ನೆಲೆಯಲ್ಲಿ ಡಿಆರ್‌ಐ ಅಧಿಕಾರಿಗಳು ನೋಟಿಸ್ ಜಾರಿಗೊಳಿಸಿದ್ದಾರೆ. ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ರನ್ಯಾ ರಾವ್ ಸೇರಿದಂತೆ ನಾಲ್ವರು ಆರೋಪಿಗಳಿಗೆ ಡಿಆರ್‌ಐ ಈಗಾಗಲೇ ನೋಟಿಸ್ ನೀಡಿದೆ.
ಮತ್ತೊಂದೆಡೆ ಇ.ಡಿ. ಕೂಡ ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ 37 ಕೋಟಿಯಷ್ಟು ಆಸ್ತಿಯನ್ನು ಜಪ್ತಿ ಮಾಡಿದೆ.ಇದರ ಬೆನ್ನಲ್ಲೇ ನಟಿ ರನ್ಯಾ ರಾವ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಡಿಆರ್‌ಐ ಅಧಿಕಾರಿಗಳು ಅಡ್ ಜುಡಿಕೇಷನ್ ಮಾಡಿ ನೋಟಿಸ್ ನೀಡಿದ್ದಾರೆ.
ಮಾರ್ಚ್ 4ರಂದು ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಚಿನ್ನವನ್ನು ವಶಕ್ಕೆ ಪಡೆದುಕೊಂಡು ರನ್ಯಾ ರಾವ್ ಅವರನ್ನು ಡಿಆರ್‌ಐ ಬಂಧಿಸಿತ್ತು. ಈ ಬಗ್ಗೆ ತನಿಖೆ ನಡೆಸಿದ ಡಿಆರ್‌ಐ ಅಧಿಕಾರಿಗಳು ರನ್ಯಾ ರಾವ್ ಅವರು ಅಕ್ರಮವಾಗಿ 127.3 ಕೆಜಿ ಚಿನ್ನ ಸಾಗಾಟ ಮಾಡಿರುವುದನ್ನು ಸಾಕ್ಷಿ ಸಮೇತ ಪತ್ತೆಹಚ್ಚಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು102.55 ಕೋಟಿ ರೂ. ದಂಡ ಪಾವತಿಸುವಂತೆ ಡಿ ಆರ್ ಐ ಅಧಿಕಾರಿಗಳು ಜೈಲಿಗೆ ತೆರಳಿ ರನ್ಯಾ ಸೇರಿ ಎಲ್ಲಾ ನಾಲ್ವರೂ ಆರೋಪಿಗಳಿಗೆ ನೋಟಿಸ್ ನೀಡಿದ್ದಾರೆ. ದಂಡ ಪಾವತಿ ಮಾಡದಿದ್ದರೆ ಆಸ್ತಿ ಮುಟ್ಟುಗೋಲು ಹಾಕಲು ಅವಕಾಶವಿದೆ.
ಎ2 ಆರೋಪಿ ತರುಣ್ ಕೊಂಡುರೂ ರಾಜು 67.6 ಕೆಜಿ ಚಿನ್ನ ಕಳ್ಳಸಾಗಣೆ ಮಾಡಿರುವುದು ಧೃಡವಾಗಿದೆ. ಈ ಹಿನ್ನೆಲೆಯಲ್ಲಿ ತರುಣ್ ಕೊಂಡೂರು ರಾಜು ಗೆ 62 ಕೋಟಿ ರೂ ದಂಡ ವಿಧಿಸಲಾಗಿದೆ. ಸಾಹಿಲ್ ಜೈನ್ ಮತ್ತು ಭರತ್ ಜೈನ್ ತಲಾ 63.61 ಕೆಜಿ ಚಿನ್ನ ಕಳ್ಳಸಾಗಣೆ ಮಾಡಿರುವುದು ಧೃಡಪಟ್ಟಿದೆ. ಭರತ್ ಜೈನ್ ಹಾಗೂ ಸಾಹಿಲ್ ಜೈನ್ 53 ಕೋಟಿ ದಂಡ ಪಾವತಿ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಜೊತೆಗೆ ಕ್ರಿಮಿನಲ್ ಕೇಸ್ ಕೂಡ ಮುಂದುವರಿಯಲಿದೆ.
ಸುಮಾರು 15 ಕೋಟಿ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ರನ್ಯಾ ರಾವ್ ಬಂಧನವಾಗಿತ್ತು. ಕಳೆದ ಮಾರ್ಚ್ 3ರ ರಾತ್ರಿ ದುಬೈನಿಂದ ಎಮಿರೇಟ್ಸ್ ಏರ್‌ಲೈನ್ಸ್ ವಿಮಾನದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಟಿಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ)ದ ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದಾಗ, ನಟಿ ಬಳಿ 14.80 ಕೆಜಿ ಚಿನ್ನ ಪತ್ತೆಯಾಗಿತ್ತು. ತಕ್ಷಣ ನಟಿಯನ್ನು ಬಂಧಿಸಲಾಗಿತ್ತು. ರನ್ಯಾ ರಾವ್ ಮತ್ತು ಅವರ ಸಹಚರರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.




