ಬೆಂಗಳೂರು: ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಮಾಣಿಕ್ಯ ಸಿನಿಮಾದ ನಟಿ ರನ್ಯಾ ರಾವ್ ಅವರಿಗೆ ಬಿಜೆಪಿ ನಂಟಿದೆ. ಇದರ ದಿಕ್ಕು ತಪ್ಪಿಸಲು ಬಿಜೆಪಿ ನಾಯಕರು ಕಾಂಗ್ರೆಸ್ ಸಚಿವರ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ರನ್ಯಾ ರಾವ್ ಅವರಿಗೆ 12 ಎಕರೆ ಜಮೀನು ಮಂಜೂರು ಮಾಡಲಾಗಿತ್ತು ಎಂಬ ಆರೋಪಗಳಿವೆ. ಅವರು ಸಿಕ್ಕಿಬೀಳುವ ಭಯದಿಂದ ಬೇರೆಯವರ ಮೇಲೆ ಆರೋಪ ಮಾಡಿಬಿಡುತ್ತಾರೆ ಎಂದು ಆರೋಪಿಸಿದರು.
ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ಹೆಸರನ್ನು ಬಹಿರಂಗಪಡಿಸಲಿ. ಅನಗತ್ಯವಾಗಿ ಆರೋಪ ಮಾಡುವುದು ಸರಿಯಲ್ಲ. ಯಾರು ರನ್ಯಾ ರಾವ್ ಅವರಿಗೆ ಬೆಂಬಲ ನೀಡಿದ್ದಾರೆ ಎಂಬುದನ್ನು ಹೆಸರು ಸಹಿತ ಹೇಳಲಿ. ಸದ್ಯಕ್ಕೆ ಸಿಬಿಐ ತನಿಖೆ ನಡೆಯುತ್ತಿದೆ. ಎಲ್ಲಾ ದೃಷ್ಟಿಕೋನದಿಂದಲೂ ತನಿಖೆ ನಡೆಸಿ ಸತ್ಯಾಂಶ ಹೊರಹಾಕಲಿ ಎಂದು ಸವಾಲೆಸೆದರು.
ಕಳೆದ 2 ವರ್ಷದಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಸಚಿವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಾ ಬಂದಿದ್ದಾರೆ. ಅದರಲ್ಲಿ ಯಾವುದೂ ಕೂಡ ಸತ್ಯ ಆಗಿಲ್ಲ. ಜನಪರವಾದ ಒಂದು ವಿಚಾರವನ್ನೂ ಬಿಜೆಪಿಯವರು ಚರ್ಚೆಗೆ ತೆಗೆದುಕೊಂಡಿಲ್ಲ. ಕೇವಲ ರಾಜಕೀಯ ಕಾರಣಕ್ಕಾಗಿಯೇ ಟೀಕೆ, ಆರೋಪ ಮಾಡುತ್ತಿದ್ದಾರೆ ಎಂದರು.




