ಬೆಂಗಳೂರು: ಅತ್ಯಾಚಾರ ಹನಿಟ್ರ್ಯಾಪ್ ಷಡ್ಯಂತ್ರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಚಿವ ಹಾಗೂ ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಅತ್ಯಾಚಾರ ಎಸಗಿದ ಆರೋಪ ಪ್ರಕರಣದಡಿ ಕಳೆದ ಸೆ.21ರಂದು ಕಗ್ಗಲಿಪುರ ಪೊಲೀಸರು ಮುನಿರತ್ನ ಅವರನ್ನು ಬಂಧಿಸಿದ್ದರು. ವಿಚಾರಣೆಯ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಈ ಸಂಬಂಧ ಸಲ್ಲಿಸಿದ್ದ ಜಾಮೀನು ಅರ್ಜಿಯ ಆದೇಶವನ್ನು ನ್ಯಾಯಾಲಯ ಮಂಗಳವಾರಕ್ಕೆ ಕಾಯ್ದಿರಿಸಿತ್ತು.
ಮಂಗಳವಾರ ಆದೇಶ ಹೊರಡಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಮುನಿರತ್ನಗೆ ಜಾಮೀನು ನೀಡಿದೆ.



