ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಎಸ್ಪಿ ಕಚೇರಿ ಪಕ್ಕದಲ್ಲೇ ಇರುವ ಲೋಕಸಭಾ ಸದಸ್ಯರ ನಿವಾಸ ಹಾಗೂ ಹೊಳೆನರಸೀಪುರ ಪಟ್ಟಣದಲ್ಲಿರುವ ಮಾಜಿ ಸಚಿವ ಎಚ್ ಡಿ ರೇವಣ್ಣ ನಿವಾಸದಲ್ಲಿ ನೀಡಿದ ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ತಂಡ ತಪಾಸಣೆ ಪೂರ್ಣಗೊಳಿಸಿದೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಸಂಸದರ ನಿವಾಸದಲ್ಲಿ ಅತ್ಯಾಚಾರವಾಗಿದೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ನಿವಾಸದಲ್ಲಿ ಸತತ ನಾಲ್ಕು ಗಂಟೆಗಳ ಪರಿಶೀಲನೆ ನಡೆಸಲಾಯಿತು. ಅನೇಕ ದಾಖಲೆಗಳನ್ನು ಸಂಗ್ರಹಿಸಿದ ಅಧಿಕಾರಿಗಳು ನಂತರ ಹೊಳೆನರಸೀಪುರಕ್ಕೆ ತೆರಳಿದರು.
ಹಿಂದೆ ಸಂತ್ರಸ್ತ ಮಹಿಳೆಯೊಬ್ಬರು ತನ್ನ ಮೇಲೆ ಸಂಸದರ ನಿವಾಸದಲ್ಲಿ ಅತ್ಯಾಚಾರ ನಡೆಸಿದ್ದಾರೆ ಎಂದು ಹೇಳಿಕೆ ನೀಡಿ ದೂರು ದಾಖಲಿಸಿದ್ದರು. ಮಹಿಳೆಯ ದೂರನ್ನಾಧರಿಸಿ ಎಫ್‌ಎಸ್‌ಎಲ್ ತಂಡ ಸ್ಥಳ ಪರಿಶೀಲನೆ ನಡೆಸಿದೆ.
ಸ್ಥಳ ಪರಿಶೀಲನೆ ಬಳಿಕ ಸಂಸದರ ನಿವಾಸವನ್ನು ಸೀಜ್ ಮಾಡಿ ಬೀಗ ಹಾಕಿ ಕೀಲಿಯನ್ನು ಎಫ್‌ಎಸ್‌ಎಲ್ ಅಧಿಕಾರಿಗಳ ತಂಡ ವಶಕ್ಕೆ ಪಡೆದಿದೆ.
ಮೇ 4 ರಂದು ಸಂತ್ರಸ್ತ ಮಹಿಳೆ ಜತೆ ಎಸ್‌ಐಟಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದರು. ಅದಾದ ಬಳಿಕ ಮತ್ತೆ ಎರಡನೇ ಬಾರಿ ಪರಿಶೀಲನೆ ನಡೆಸಿದ್ದಾರೆ. ಹೊಳೆನರಸೀಪುರದ ಚೆನ್ನಾಂಬಿಕ ನಿವಾಸದಲ್ಲೂ ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಮಹಿಳೆ ನೀಡಿದ ಹೇಳಿಕೆ ಆಧರಿಸಿ ಅಲ್ಲಿಗೂ ತೆರಳಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು.



