ಹೈದರಾಬಾದ್: ತೆಲಂಗಾಣದ ರಾಜಧಾನಿ ಹೈದರಾಬಾದಿನ ರಾಜೇಂದ್ರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ಟೋಬರ್ 15ರಂದು ಮನೆಯಂಗಳದಲ್ಲಿ ಆಟವಾಡುತ್ತಿದ್ದ 4 ವರ್ಷದ ಮಗುವನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ ಘಟನೆ ತಡವಾಗಿ ವರದಿಯಾಗಿದೆ.
ನೆರೆಮನೆಯ ವ್ತಕ್ತಿ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಕುರಿತು ಈಗಾಗಲೇ ದೂರು ದಾಖಲಾಗಿದೆ. ಕೆಲವು ವರ್ಷಗಳಿಂದ ಮಗುವಿನ ಮನೆಯವರಿಗೆ ಪರಿಚಿತನಾಗಿದ್ದ ಆರೋಪಿ 23 ವರ್ಷದವನಾಗಿದ್ದು, ಮಗು ಆಟವಾಡುತ್ತಿದ್ದ ವೇಳೆ, ಚಾಕಲೇಟ್ ಆಸೆ ತೋರಿಸಿ ಅತ್ಯಾಚಾರ ಎಸಗಿದ್ದಾನೆ. ಯಾರಿಗೂ ಹೇಳದಂತೆ ಮಗುವನ್ನು ಬೆದರಿಸಿ, ಕಳಿಸಿದ್ದಾನೆ. ತಡವಾಗಿ ಈ ವಿಚಾರ ಬೆಳಕಿಗೆ ಬಂದಿದೆ.



