ಕಾಂಗ್ರೆಸ್ ಕೈಗೆ ಅಧಿಕಾರ ಕೊಟ್ಟರೆ, ರೌಡಿಗಳ ಕೈಯಲ್ಲಿ ಮಚ್ಚು ಲಾಂಗು, ಉಗ್ರರ ಕೈಯಲ್ಲಿ ಬಾಂಬು ಕೊಟ್ಟಂಗೆ: ಆರ್ ಅಶೋಕ್

2 years ago

ಬೆಂಗಳೂರು: ಕಾಂಗ್ರೆಸ್ ಕೈಗೆ ಅಧಿಕಾರ ಕೊಟ್ಟರೆ, ರೌಡಿಗಳ ಕೈಯಲ್ಲಿ ಮಚ್ಚು ಲಾಂಗು, ಉಗ್ರರ ಕೈಯಲ್ಲಿ ಬಾಂಬು ಕೊಟ್ಟಂಗೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಶಾಂತಿ, ಸುವ್ಯವಸ್ಥೆ, ಕಾನೂನು ಪರಿಪಾಲನೆಗೆ ಹೆಸರುವಾಸಿಯಾಗಿದ್ದ ಕರ್ನಾಟಕ @INCKarnataka ಆಡಳಿತದಲ್ಲಿ ಅಕ್ಷರಶಃ ರೌಡಿ ರಾಜ್ಯವಾಗಿ ಮಾರ್ಪಟ್ಟಿದೆ ಎಂದು ದೂರಿದ್ದಾರೆ.

ಕಾಂಗ್ರೆಸ್ ಸರ್ಕಾರ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿದ್ದೇ ತಡ, ಭಯೋತ್ಪಾದಕರು, ರೌಡಿ ಶೀಟರ್ ಗಳು, ಕೊಲೆಗಡುಕರು, ಬಾಂಬು, ಮಚ್ಚು, ಲಾಂಗು ಹಿಡಿದು ರಾಜ್ಯದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಸಿದ್ದಾರೆ ಎಂದಿದ್ದಾರೆ.

ಚನ್ನಗಿರಿಯಲ್ಲಿ ಪೊಲೀಸ್ ಠಾಣೆ ಧ್ವಂಸ ಮಾಡಿರುವ ಘಟನೆ, ಉಡುಪಿಯಲ್ಲಿ ನಡುರಸ್ತೆಯಲ್ಲೇ ಗ್ಯಾಂಗ್ ವಾರ್ ನಡೆದಿರುವ ಘಟನೆ ಇವನ್ನೆಲ್ಲ ನೋಡುತ್ತಿದ್ದರೆ ರಾಜ್ಯದಲ್ಲಿ ಕಾನೂನಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎನ್ನುವುದು ಸ್ಪಷ್ಟವಾಗುತ್ತದೆ ಎಂದಿದ್ದಾರೆ.

ಸಿಎಂ @siddaramaiah ನವರೇ, ರಾಜ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಹತ್ಯೆಗಳು, ಅತ್ಯಾಚಾರಗಳು, ಗ್ಯಾಂಗ್ ವಾರ್ ಗಳು, ಗಾಂಜಾ ಮಾರಾಟ ದಂಧೆಗಳು, ರೇವ್ ಪಾರ್ಟಿಗಳು, ಕೋಮು ಗಲಭೆಗಳು, ಗಲಾಟೆಗಳಿಂದ ಕರ್ನಾಟಕದ ಗೌರವ ಮಣ್ಣುಪಾಲಗುತ್ತಿದೆ. ನಿಮ್ಮ ಕೈಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ಕನ್ನಡಿಗರು ನೆಮ್ಮದಿಯಿಂದ ಬದುಕಲು ಬಿಡಿ ಎಂದು ಹೇಳಿದ್ದಾರೆ.

Leave a Reply