ದಾವಣಗೆರೆ: ಶನಿವಾರ ದಾವಣಗೆರೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಆದಾಲತ್ನ್ನುಲ ಹಮ್ಮಿಕೊಳ್ಳಲಾಗಿತ್ತು. ರಾಜಿ, ಸಂಧಾನದ ಮೂಲಕ ಜಿಲ್ಲೆಯಲ್ಲಿ 4,568 ಜಾರಿಯಲ್ಲಿರುವ ಪ್ರಕರಣಗಳಲ್ಲಿ ರೂ. 12,56,89,479 ಪರಿಹಾರ ಒದಗಿಸಲಾಗಿದೆ. ಮತ್ತು 1,44,773 ವ್ಯಾಜ್ಯಪೂರ್ವ ಪ್ರಕರಣಗಳಲ್ಲಿ 47,33,07,260 ಹಣದ ಪರಿಹಾರವಾಗಿ ರಾಜೀ ಮೂಲಕ ಕೊಡಿಸಿ ಪ್ರಕರಣಗಳನ್ನು ಮುಕ್ತಾಯಗೊಳಿಸಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ವಿವಿಧ ಪ್ರಕರಣಗಳ ವಿವರ: 81 ಅಪರಾಧಿಕ ಪ್ರಕರಣಗಳು, 143 ಚೆಕ್ ಅಮಾನ್ಯ ಪ್ರಕರಣಗಳು, 19 ಬ್ಯಾಂಕ್ ವಸೂಲಾತಿ ಪ್ರಕರಣಗಳು, 14 ಇತರೆ ಹಣ ವಸೂಲಾತಿ ಪ್ರಕರಣಗಳು, 53 ಅಪಘಾತ ಪ್ರಕರಣಗಳು, 19 ಪಾಲು ವಿಭಾಗ ಪ್ರಕರಣಗಳು, 200 ಜಾರಿ ಅರ್ಜಿಗಳು ಅಲ್ಲದ ಹಲವು ಕಾರಣಕ್ಕಾಗಿ ದಾಖಲಿಸಿದ 55 ದಾವೆಗಳು ಮತ್ತು ಜೀವನಾಂಶ ಕೋರಿ ದಾಖಲಿಸಿದ್ದ ದಾವೆಗಳು ರಾಜೀ ಮೂಲಕ ಇತ್ಯರ್ಥಗೊಂಡಿರುತ್ತದೆ. ಇದಲ್ಲದೇ ಇತರೆ ಪ್ರಕರಣಗಳು ಸೇರಿ ಒಟ್ಟು 1568 ಜಾರಿಯಲ್ಲಿದ್ದ ಪ್ರಕರಣಗಳು ಇತ್ಯರ್ಥಗೊಂಡಿವೆ.
ಮೇಲ್ಕಾಣಿಸಿದ ಇತ್ಯರ್ಥವಾದ ಪ್ರಕರಣಗಳಲ್ಲಿ ಪ್ರಮುಖವಾಗಿ ಕೌಟುಂಬಿಕ ಕಲಹದಿಂದಾಗಿ ಬೇರೆಯಾಗಿದ್ದ 8 ದಂಪತಿ ಒಂದಾಗಿದ್ದು ವಿಶೇಷವಾಗಿತ್ತು. ಜಿಲ್ಲೆಯಾದ್ಯಂತ ಸುಮಾರು 513 ಕ್ಕಿಂತ ಹೆಚ್ಚು ಶಾಲಾ ವಿದ್ಯಾರ್ಥಿಗಳ ಜನನ ಪ್ರಮಾಣ ಪತ್ರಗಳ ಕುರಿತು ಕಂದಾಯ ಇಲಾಖೆ ಮತ್ತು ಮಹಾನಗರ ಪಾಲಿಕೆಯ ಅಧಿಕಾರಿಗಳು ರಾಜಿ ಮಾಡಿಕೊಳ್ಳುವ ಮೂಲಕ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಮತ್ತು ಅವರುಗಳಿಗೆ ಸರ್ಕಾರದಿಂದ ಬರಬಹುದಾದ ವಿದ್ಯಾರ್ಥಿ ವೇತನ ಹಾಗೂ ಇತರ ಅನುಕೂಲತೆಗಳಿಗೆ ಅನುವು ಮಾಡಿಕೊಟ್ಟಂತಾಯಿತು.
ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಸಹಕರಿಸಿದ ನ್ಯಾಯಾವಾದಿಗಳು, ವಕೀಲರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ ಅವರು ಅಭಿನಂದನೆ ಸಲ್ಲಿಸಿದ್ದಾರೆ.




