ಸರ್ವೋಚ್ಛ ನ್ಯಾಯಾಲಯದಲ್ಲಿರುವ ವಿವಿಧ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಜುಲೈ 29 ರಿಂದ ಆ.3 ರ ವರೆಗೆ ವಿಶೇಷ ಜನತಾ ನ್ಯಾಯಾಲಯ ಆಯೋಜನೆ
ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶೆ ಕೆ.ಜಿ.ಶಾಂತಿ
ಧಾರವಾಡ: ಜುಲೈ 29 ರಿಂದ ಆ.3 ರವರೆಗೆ ಸರ್ವೋಚ್ಚ ನ್ಯಾಯಾಲಯದಲ್ಲಿರುವ ವಿವಿಧ ಪ್ರಕರಣಗಳನ್ನು ವಿಶೇಷ ಜನತಾ ನ್ಯಾಯಾಲಯದಲ್ಲಿ ಇತ್ಯರ್ಥಪಡಿಸಿಕೊಳ್ಳಲು ಸರ್ವೋಚ್ಚ ನ್ಯಾಯಾಲಯವು ಧಾರವಾಡ ಜಿಲ್ಲಾ ವ್ಯಾಪ್ತಿಯ ಕಕ್ಷಿದಾರರು, ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿ ಸರ್ವೋಚ್ಛ ನ್ಯಾಯಾಲಯದಲ್ಲಿರುವ ತಮ್ಮ ಪ್ರಕರಣಗಳನ್ನು ರಾಜಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾದೀಶೆ ಕೆ.ಜಿ.ಶಾಂತಿ ಅವರು ತಿಳಿಸಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಧಾರವಾಡ ಜಿಲ್ಲಾ ನ್ಯಾಯಾಲಯದ ವಿಡಿಯೋ ಸಂವಾದ ಸಭಾಂಗಣದಲ್ಲಿ ಮಾಧ್ಯಮಗೋಷ್ಟಿ ಜರುಗಿಸಿ, ಮಾಹಿತಿ ನೀಡಿದ ಅವರು, ಈ ಕುರಿತು ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಕರಣ ಹೊಂದಿರುವ ಕಕ್ಷಿದಾರರಿಗೆ ಮಾಹಿತಿ, ನೋಟಿಸ್ ನೀಡಲು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯ ಕಾರ್ಯನಿರ್ವಾಹಕ ಅಧ್ಯಕ್ಷರಾದ ನ್ಯಾಯಮೂರ್ತಿ ಕೆ. ಸೋಮಶೇಖರ ಅವರು ನಿರ್ದೇಶನ ನೀಡಿದ್ದಾರೆ ಎಂದರು.
ಅದರಂತೆ ಕ್ರಮವಹಿಸಲಾಗುತ್ತಿದೆ ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಕರಣ ಹೊಂದಿದವರಿಗೆ ವಿಶೇಷ ಜನತಾ ನ್ಯಾಯಾಲಯದಲ್ಲಿ ಭಾಗವಹಿಸಿ, ಇತ್ಯರ್ಥಪಡಿಸಿಕೊಳ್ಳಲು ಜಿಲ್ಲಾ ನ್ಯಾಯಾಲಯದಲ್ಲಿ ಉಚಿತವಾಗಿ ವಿಡಿಯೋ ಕಾನ್ಪರೆನ್ಸ್ ಮತ್ತು ಇತರ ಅನುಕೂಲಗಳನ್ನು ಮಾಡಿಕೊಡಲಾಗುತ್ತದೆ. ಜಿಲ್ಲಾ ಕಕ್ಷಿದಾರರಿಗೆ ಮತ್ತು ಸಾರ್ವಜನಿಕರಿಗೆ ಈ ಸಂಗತಿಯ ಬಗ್ಗೆ ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳ ಮೂಲಕ ವ್ಯಾಪಕ ಪ್ರಚಾರವನ್ನು ನೀಡಬೇಕು ಇದರಿಂದ ಬಡ ಮತ್ತು ರಾಜಿ ಅಗತ್ಯವಿರುವ ಕಕ್ಷಿಗಾರರಿಗೆ ಸಹಾಯವಾಗುತ್ತದೆ ಎಂದರು.
ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ: ಡಿಸೆಂಬರ್ 9, 2023 ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ರಾಜೀ ಆಗಬಹುದಾದಂತಹ 17,581 ಪ್ರಕರಣಗಳನ್ನು ತೆಗೆದುಕೊಂಡು ಅವುಗಳ ಪೈಕಿ 12,827 ಪ್ರಕರಣಗಳನ್ನು ಹಾಗೂ 75,091 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ತೆಗೆದುಕೊಂಡು ಅವುಗಳ ಪೈಕಿ 74,419 ಪ್ರಕರಣಗಳನ್ನು ಸೇರಿ ಒಟ್ಟು 87,246 ಪ್ರಕರಣಗಳನ್ನು ರಾಜೀ ಸಂಧಾನ ಮಾಡಿಸಲಾಗಿದೆ ಎಂದರು.
ಮಾರ್ಚ್ 16, 2024 ರಂದು ಜರುಗಿದ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ 66,296 ಪೂರ್ವ ವಾಜ್ಯ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ನ್ಯಾಯಾಲಯದಲ್ಲಿ ಬಾಕಿ ಇದ್ದ ಪ್ರಕರಣಗಳ ಪೈಕಿ 13,284 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದರು.
ಬರುವ ಜುಲೈ 13 ರಂದು ಜರುಗುವ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಮೇ 30,2024 ರವರೆಗೆ ಒಟ್ಟು 10,704 ಪ್ರಕರಣಗಳನ್ನು ರಾಜೀ ಮಾಡಿಸಲು ಗುರುತಿಸಲಾಗಿದೆ ಎಂದರು.
ಪ್ರತಿ ಅದಾಲತ್ನಲ್ಲೂ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಹುಬ್ಬಳ್ಳಿ, ಮುಖ್ಯ ಕಾರ್ಯನಿರ್ವಾಹಣಾಕಾರಿ, ಜಿಲ್ಲಾ ಪಂಚಾಯತ್, ಧಾರವಾಡ ಹಾಗೂ ಆಯುಕ್ತರು, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಧಾರವಾಡ ಇವರಿಗೆ ರಾಷ್ಟ್ರೀಯ ಲೋಕ ಅದಾಲತ್ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಪ್ರಚಾರ ಮಾಡಲು ನಿರ್ದೇಶಿಸಲಾಗುತ್ತಿದೆ ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರ ಸಲಹೆ, ಸೂಚನೆ, ಮಾರ್ಗದರ್ಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಪ್ರತಿ ತಾಲೂಕಿಗೂ ಭೇಟಿ ನೀಡಿ ಸ್ಥಳೀಯ ನ್ಯಾಯಾಧೀಶರುಗಳೊಂದಿಗೆ ತಾಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳ ಮತ್ತು ನ್ಯಾಯವಾದಿಗಳ ಸಂಘಗಳ ಸಭೆ ನಡೆಸಿ ಲೋಕ ಅದಾಲತ್ನ ಬಗ್ಗೆ ಹಾಗೂ ಲಘು ಪ್ರಕರಣಗಳ ಕಾಯ್ದೆಗಳನ್ನು ಸೂಕ್ತ ರೀತಿಯಲ್ಲಿ ಜಾರಿ ಮಾಡುವ ಮೂಲಕ ಜಿಲ್ಲೆಯ ಎಲ್ಲ ಆಡಳಿತ ಮಂಡಳಿ ಕಾನೂನು ಬದ್ಧವಾಗಿ ಕರ್ತವ್ಯ ನಿರ್ವಹಿಸಲು ಸೂಕ್ತ ಮಾರ್ಗದರ್ಶನ ಹಾಗೂ ಸಲಹೆ ಸೂಚನೆಗಳನ್ನು ನೀಡುತ್ತಿದ್ದಾರೆ ಎಂದರು.
ಬರುವ ಜುಲೈ 13 ರಂದು ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್ನಲ್ಲೂ ಸಹ ಜಿಲ್ಲೆಯ ನ್ಯಾಯಾಲಯಗಳಲ್ಲಿ ಬಾಕಿ ಇರುವ ಸಿವಿಲ್ ದಾವೆಗಳು, ಚೆಕ್ ಬೌನ್ಸ್ ಪ್ರಕರಣಗಳು, ವಿವಾಹ ವಿಚ್ಛೇದನ ಹೊರತುಪಡಿಸಿ ಕೌಟುಂಬಿಕ ಪ್ರಕರಣಗಳು, ರಾಜಿ ಮಾಡಿಕೊಳ್ಳಬಹುದಾದ ಕ್ರಿಮಿನಲ್ ಪ್ರಕರಣಗಳು, ಎಲ್.ಎ.ಸಿ ಪ್ರಕಣಗಳು, ಅಪಘಾತ ಪರಿಹಾರ ಪ್ರಕರಣಗಳನ್ನು ರಾಜೀ ಸಂದಾನ ಮೂಲಕ ಇತ್ಯರ್ಥಪಡಿಸಲು ಪ್ರಕರಣಗಳ ಕಕ್ಷಿದಾರರು, ಇಲಾಖೆಗಳ ಅಧಿಕಾರಿಗಳು, ನ್ಯಾಯವಾದಿಗಳು ಸಹಕರಿಸಬೇಕು ಎಂದರು.
ಪತ್ರಿಕಾಗೋಷ್ಟಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರುಶರಾಮ ದೊಡ್ಡಮನಿ ಅವರು ಇದ್ದರು.




