ಬೆಂಗಳೂರು: ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಸಮರಸಾರಿ ಬಿಜೆಪಿಗೆ ಗುಡ್ ಬೈ ಹೇಳಿರುವ ಮಾಜಿ ಸಚಿವ ಹಾಗೂ ಹಿರಿಯ ನಾಯಕ ಕೆ ಎಸ್ ಈಶ್ವರಪ್ಪ ಇದೀಗ ದಲಿತ ಮತ್ತು ಹಿಂದುಳಿದ ವರ್ಗಗಳ ಸಂಘಟನೆಗೆ ಮುಂದಾಗಿದ್ದಾರೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಈ ಹಿಂದೆ ರಾಯಣ್ಣ ಬ್ರಿಗೇಡ್ ಮಾಡಿ ಯಡಿಯೂರಪ್ಪ ಕುಟುಂಬಕ್ಕೆ ಸೆಡ್ಡು ಹೊಡೆದಿದ್ದ ಅವರು, ಇದೀಗ ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಸಂಘಟಿಸಲು ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪೂರ್ವಭಾವಿ ಸಭೆಗಳನ್ನು ನಡೆಸುತ್ತಿರುವ ಅವರು ಬಾಗಲಕೋಟೆಯಲ್ಲಿ ಪ್ರಮುಖ ನಾಯಕರ ಸಭೆ ಕರೆದಿದ್ದಾರೆ. ದಲಿತ ಮತ್ತು ಹಿಂದುಳಿದ ವರ್ಗಗಳ ಮಠಾಧೀಶರ ನೇತೃತ್ವದಲ್ಲಿ ಈ ಸಭೆ ನಡೆಯುತ್ತಿದ್ದು, ಬಿಜೆಪಿಯ ಎಲ್ಲಾ ಅಸಮಾಧಾನಗೊಂಡ ನಾಯಕರನ್ನು ಸಮಾವೇಶಕ್ಕೆ ಆಹ್ವಾನ ನೀಡಲಾಗಿದೆ.
ಮಾಜಿ ಸಚಿವ ಹಾಗೂ ಪಕ್ಷದ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಂಸದ ವಿರುಪಾಕ್ಷಪ್ಪ, ಮಾಜಿ ಸಚಿವ ಗೂಳಿಹಟ್ಟಿ ಶೇಖರ್, ಮಾಜಿ ಶಾಸಕ ರಘುಪತಿ ಭಟ್ ಸೇರಿದಂತೆ ಹಲವು ಪ್ರಮುಖ ನಾಯಕರ ನೇತೃತ್ವದಲ್ಲಿ ಈ ಸಭೆ ನಡೆಯುತ್ತಿದೆ. ಸದ್ಯದಲ್ಲೇ ಬೆಂಗಳೂರಿನಲ್ಲಿ ದೊಡ್ಡ ಸಮಾವೇಶ ನಡೆಸಲು ತೀರ್ಮಾನ ಮಾಡಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಯಡಿಯೂರಪ್ಪ ಪುತ್ರ ವಿಜಯೇಂದ್ರ ನಿರ್ಗಮಿಸುವವರೆಗೆ ತಾವು ಬಿಜೆಪಿ ಸೇರುವುದಿಲ್ಲ ಎಂದು ಘೋಷಿಸಿರುವ ಅವರು, ರಾಷ್ಟ್ರಭಕ್ತರ ಹೆಸರಿನಲ್ಲಿ ತಮ್ಮ ನೂತನ ಬ್ರಿಗೇಡ್ ಸಂಘಟಿಸುವುದಾಗಿ ಘೋಷಿಸಿದ್ದಾರೆ.



