ಶಾರ್ಜಾ: ಇಂದು ಸಂಜೆ 7:30ಕ್ಕೆ ನಡೆಯಲಿರುವ ಪಂದ್ಯದಲ್ಲಿ ಆರ್‌ಸಿಬಿ ತಂಡ ಸನ್‌ರೈಸರ್ಸ್ ವಿರುದ್ಧ ಕಣಕ್ಕಿಳಿಯಲಿದೆ. ಕೇನ್ ವಿಲಿಯಮ್ಸನ್ ನಾಯಕತ್ವದ ಹೈದರಾಬಾದ್ ಪ್ಲೇ ಆಫ್ ತಲುಪುವಲ್ಲಿ ವಿಫಲವಾಗಿ ಹೊರಗುಳಿದಿದೆ. ಆರ್‌ಸಿಬಿ ಸದ್ಯಕ್ಕೆ 3ನೇ ಸ್ಥಾನದಲ್ಲಿದ್ದು, 12 ಪಂದ್ಯಗಳಿಂದ 16 ಅಂಕ ಗಳಿಸಿದೆ.
ಮುಂದಿನ ಎರಡೂ ಪಂದ್ಯಗಳಲ್ಲಿ ಬೆಂಗಳೂರು ಗೆದ್ದರೆ ಅಂಕಗಳಿಕೆ 20ಕ್ಕೆ ಏರಲಿದೆ. 13 ಪಂದ್ಯಗಳನ್ನಾಡಿರುವ ಡೆಲ್ಲಿ 20 ಮತ್ತು ಚೆನ್ನೈ ಸೂಪರ್ ಕಿಂಗ್ಸ್ 18 ಅಂಕ ಗಳಿಸಿ ಮೊದಲ ಎರಡು ಸ್ಥಾನಗಳನ್ನು ಗಳಿಸಿವೆ.
ಸತತ 3 ಪಂದ್ಯಗಳಲ್ಲಿ ಗೆಲುವಿನ ಕೇಕೆ ಹಾಕಿರುವ ಬೆಂಗಳೂರು ಆತ್ಮವಿಶ್ವಾಸದಲ್ಲಿದೆ. ಗ್ಲೆನ್ ಮ್ಯಾಕ್ಸ್‌ವೆಲ್ ಉತ್ತಮ ಬ್ಯಾಟಿಂಗ್ ಮಾಡುತ್ತಿದ್ದಾರೆ. ವಿರಾಟ್, ದೇವದತ್ತ, ಭರತ್, ಮ್ಯಾಕ್ಸ್‌ವೆಲ್ ಮತ್ತು ಎಬಿ ಡಿವಿಲಿಯರ್ಸ್ ನಂತರ ದೊಡ್ಡ ಬ್ಯಾಟಿಂಗ್ ಪಡೆ ಮತ್ತು ಹರ್ಷಲ್ ಪಟೇಲ್, ಸ್ಪಿನ್ನರ್ ಯಜುವೇಂದ್ರ ಚಾಹಲ್, ಮೊಹಮ್ಮದ್ ಸಿರಾಜ್ ಮತ್ತು ಶಾಬಾಜ್ ಅಹಮದ್ ಬೌಲರ್ ಗಳು ತಂಡವನ್ನು ಯಶಸ್ಸಿನತ್ತ ಕೊಂಡೊಯ್ಯುತ್ತಿದ್ದಾರೆ.