ಬೆಂಗಳೂರು: ಸದನದಲ್ಲಿ ಸದಾ ಹಾಜರಿದ್ದು, ಎಲ್ಲ ಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಶ್ರದ್ಧಯಿಂದ ಆಲಿಸಿ, ಸೂಕ್ತವಾಗಿ ಸ್ಪಂದಿಸುವವರು ಮಾತ್ರ ಉತ್ತಮ ಸಂಸದೀಯ ಪಟುವಾಗಿ ಬೆಳೆಯಲು ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ನೂತನ ಸಂಸದ ಸಾಗರ್ ಈಶ್ವರ ಖಂಡ್ರೆಗೆ ಕಿವಿಮಾತು ಹೇಳಿದ್ದಾರೆ.
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
- ಸಂವಿಧಾನವೇ ನನಗೆ ಧರ್ಮ, ಜನರೇ ನನ್ನ ಪಾಲಿನ ದೇವರು: ಸಿದ್ದರಾಮಯ್ಯ
ತಮ್ಮನ್ನು ಭೇಟಿಯಾದ ಸಾಗರ್ ಖಂಡ್ರೆ ಅವರಿಗೆ ಆಶೀರ್ವಾದ ಮಾಡಿದ ಸಿದ್ದರಾಮಯ್ಯ, ಕೇಂದ್ರ ಸಚಿವ ಖೂಬಾ ವಿರುದ್ಧ ಪ್ರಚಂಡ ಬಹುಮತದಿಂದ ಜಯ ಸಾಧಿಸಿರುವುದಕ್ಕಾಗಿ ಅಭಿನಂದನೆ ಸಲ್ಲಿಸಿದರು.
ಸದನದಲ್ಲಿ ಸಂಸದರಾಗಿ ಹೇಗೆ ರಾಜ್ಯದ ಹಿತ ಕಾಯಬೇಕು ಎಂಬ ಬಗ್ಗೆ ತಿಳಿಸಿದ ಅವರು, ಗ್ರಂಥಾಲಯದ ಪ್ರಯೋಜನ ಪಡೆದು ಸದನದಲ್ಲಿ ಮುತ್ಸದ್ದಿ ರಾಜಕಾರಣಿಗಳು ಮಾಡಿರುವ ಭಾಷಣಗಳನ್ನು ಓದುವಂತೆಯೂ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಸಾಗರ್ ಖಂಡ್ರೆ ತಂದೆ ಹಾಗೂ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ ಸಚಿವ ರಹೀಂಖಾನ್, ಮಾಜಿ ಸಚಿವ ರಾಜಶೇಖರ ಪಾಟೀಲ್, ಕೆ.ಎಂ.ಎಫ್. ಅಧ್ಯಕ್ಷ ಭೀಮಾ ನಾಯ್ಕ್, ಮಾಜಿ ಶಾಸಕ ಅಶೋಕ್ ಖೇಣಿ, ಚಿಂಚೋಳಿಯ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಸುಭಾಷ್ ವಿ ರಾಠೋಡ್, ಕಲ್ಬುರ್ಗಿ ಮಾಜಿ ಮೇಯರ್ ಶರಣು ಮೋದಿ ಮತ್ತಿತರರು ಉಪಸ್ಥಿತರಿದ್ದರು.
ಕಲ್ಯಾಣ ಕರ್ನಾಟಕದಲ್ಲಿ ಐದಕ್ಕೆ ಐದೂ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜಯ ತಂದುಕೊಟ್ಟಿದ್ದಕ್ಕಾಗಿ ಸಿದ್ದರಾಮಯ್ಯ ಕಲ್ಯಾಣ ಕರ್ನಾಟಕ ಭಾಗದ ಎಲ್ಲ ನಾಯಕರಿಗೆ ಅಭಿನಂದನೆ ಸಲ್ಲಿಸಿದರು.




