ವೆಬ್ ಸೀರೀಸ್ ಹುಚ್ಚಿಗೆ ಬಲಿಯಾದನೇ ಗಾಂಧಾರ್?
ಬೆಂಗಳೂರು: ಜಾನಪದ ಗಾಯಕಿ ಸವಿತ ಅವರ ಮಗ ಸಾವಿಗೆ ಶರಣಾದ ಹೃದಯ ವಿದ್ರಾವಕ ಘಟನೆಯ ಹಿಂದೆ ಆಘಾತಕಾರಿ ಸಂಗತಿ ಇರುವ ಅಂಶ ಬೆಳಕಿಗೆ ಬಂದಿದೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಕೆಲವು ದಿನಗಳ ಹಿಂದೆ ಚೆನ್ನಮ್ಮ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸವಿತ ಅವರ ಮಗ 14 ವರ್ಷದ ಬಾಲಕ ಗಾಂಧಾರ್ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದ. ಮನೆಯಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ. ಅಮ್ಮ ಅಣ್ಣ ಎಲ್ಲರ ಜೊತೆಗೂ ಚೆನ್ನಾಗಿಯೇ ಇದ್ದ ಆ ಬಾಲಕ ಏಕಾಏಕಿ ನೇಣಿಗೆ ಶರಣಾಗಿದ್ದು ಎಲ್ಲರಿಗೂ ಶಾಕ್ ಆಗಿತ್ತು. ಈ ಪ್ರಕರಣದ ತನಿಖೆಗೆ ಇಳಿದಾಗ ಹಲವರು ಶಾಕಿಂಗ್ ವಿಚಾರಗಳು ಬಹಿರಂಗವಾಗಿವೆ.
ರಾತ್ರಿ ಎಲ್ಲರ ಜೊತೆಗೆ ಊಟ ಮಾಡಿ ತನ್ನ ಪ್ರೀತಿಯ ನಾಯಿ ರಾಕಿ ಜೊತೆಗೆ ಮಲಗಿದ್ದ ಗಾಂಧಾರ್, ಬೆಳಗಿನ ವೇಳೆ ತನ್ನ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದ. ನೇಣಿಗೆ ಶರಣಾಗುವ ಮೊದಲು ಒಂದು ಡೆತ್ ನೋಟ್ ಬರೆದಿದ್ದ. ಅದರಲ್ಲಿ ತಂದೆ ತಾಯಿಯನ್ನು ಉದ್ದೇಶಿಸಿ ನೀವು ನನ್ನನ್ನು ಹದಿನಾಲ್ಕು ವರ್ಷ ಚೆನ್ನಾಗಿಯೇ ಸಾಕಿದ್ದೀರಿ. ನಿಮ್ಮ ಜೊತೆಗೆ ನಾನು ತುಂಬಾ ಖುಷಿಯಾಗಿದ್ದೆ. ಆದರೆ ನಾನು ಹೋಗುವ ಸಮಯ ಬಂದಿದೆ. ನೀವು ಈ ಪತ್ರ ಓದುವ ವೇಳೆಗೆ ನಾನು ಸ್ವರ್ಗದಲ್ಲಿ ಇರುತ್ತೇನೆ ಎಂದು ಡೆತ್ ನೋಟ್ ಬರೆದಿದ್ದ.

ಮಗ ಗಾಂಧಾರ್ ಜೊತೆಗೆ ಕಲಾವಿದೆ ಸವಿತಾ
ಈ ಡೆತ್ ನೋಟ್ ನೋಡಿದ ಎಲ್ಲರಿಗೂ ಶಾಕ್ ಆಗಿತ್ತು. ಅದರಲ್ಲಿ ಯಾವುದೇ ನೆಗಟಿವ್ ವಿಚಾರಗಳಿಲ್ಲ, ಯಾರ ಮೇಲೂ ಆರೋಪಗಳಿಲ್ಲ. ಯಾವುದೇ ಸಮಸ್ಯೆ ಕೂಡ ಇಲ್ಲ. ಹೀಗಿದ್ದರೂ ಈ ಬಾಲಕ ಇಷ್ಟು ಚಿಕ್ಕವಯಸ್ಸಿಗೆ ಏಕೆ ಇಷ್ಟು ದೊಡ್ಡ ನಿರ್ಧಾರ ತೆಗೆದುಕೊಂಡ ಎಂಬ ಪ್ರಶ್ನೆ ಕಾಡಿತ್ತು.
ಪ್ರಕರಣ ದಾಖಲಿಸಿ ಪೊಲೀಸರು ತನಿಖೆಗೆ ಇಳಿದಾಗ ಹಲವು ವಿಚಾರಗಳು ಬೆಳಕಿಗೆ ಬಂದಿವೆ. ಗಂಧಾರ್ ಜಪಾನೀಸ್ ಭಾಷೆಯಲ್ಲಿ ಬಿಡುಗಡೆಯಾಗಿ ವಿಶ್ವಾದ್ಯಂತ ಪ್ರಸಿದ್ಧಿ ಪಡೆದಿದ್ದ ಡೆತ್ ನೋಟ್ ವೆಬ್ ಸೀರಿಸ್ ಎಲ್ಲಾ ಸಂಚಿಕೆಯನ್ನು ತಪ್ಪದೇ ನೋಡುತ್ತಿದ್ದ. ಅಷ್ಟೇ ಅಲ್ಲದೇ ಆ ವೆಬ್ ಸಿರಿಸ್ ನಲ್ಲಿ ಬರುವ ಒಂದು ಪಾತ್ರವನ್ನು ಗಾಂಧಾರ್ ತನ್ನ ರೂಮಿನಲ್ಲಿ ಬಿಡಿಸಿದ್ದ.
ಈ ವೆಬ್ ಸೀರಿಸ್‌ನಲ್ಲಿ ಒಂದು ಪಾತ್ರವಿದೆ. ಆ ಪಾತ್ರ ಹೇಳಿದಂತೆ ಹೀರೋ ನಡೆದುಕೊಳ್ಳುತ್ತಾನೆ. ಆ ಮಾಯಾಬುಕ್‌ನಲ್ಲಿ ಯಾರ ಹೆಸರು ಬರೆದು ಅವರು ಹೇಗೆ ಸಾಯಬೇಕು ಎಂದು ಊಹೆ ಮಾಡಿಕೊಂಡರೆ ಆ ವ್ಯಕ್ತಿ ಆ ರೀತಿ ಸಾಯುತ್ತಾನೆ. ಕೆಟ್ಟವರು ಯಾರು ಕೂಡ ಭೂಮಿ ಮೇಲೆ ಬದಕಬಾರದು. ಅವರನ್ನು ಕೊಲೆ ಮಾಡಬೇಕು ಎನ್ನುವುದೇ ಆ ವೆಬ್ ಸೀರಿಸ್‌ನ ಕಥಾವಸ್ತು.
ಈ ಡೆತ್‌ನೋಟ್ ವೆಬ್ ಸೀರಿಸ್ ನೋಡಿ ಅದರ ಅದರ ಪ್ರಭಾವಕ್ಕೆ ಒಳಗಾಗಿ ಗಾಂಧಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾನಾ ಎಂಬ ಶಂಕೆ ಈಗ ವ್ಯಕ್ತವಾಗಿದೆ. ಅತಿಯಾದ ಆಧ್ಯಾತ್ಮದ ಕಡೆಗೆ ಒಲವು ಇರುವ ಅನುಮಾನವೂ ವ್ಯಕ್ತವಾಗಿದೆ. ಸದ್ಯ ಬಾಲಕ ಗಾಂಧಾರ್ ಬಳಸುತ್ತಿದ್ದ ಮೊಬೈಲ್ ವಶಕ್ಕೆ ಪಡೆದು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.




