ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯ ‘ಪತ್ರಿಕೋದ್ಯಮ’ ವಿಭಾಗದಲ್ಲಿ ವಿಶೇಷ ಉಪನ್ಯಾಸ
ಬಳ್ಳಾರಿ: ಪತ್ರಿಕೋದ್ಯಮ ಎಂಬುದು ಜನರ ಜೀವನಾಡಿಯಂತಿದ್ದು, ಬದಲಾಗುತ್ತಿರುವ ಶಿಕ್ಷಣ ಕ್ರಮದಲ್ಲಿ ಕೌಶಲ್ಯ ಆಧಾರಿತ ತಾಂತ್ರಿಕ ಕಲಿಕೆಗೆ ಒತ್ತು ನೀಡಬೇಕು. ದಿನವೂ ಪತ್ರಿಕೆಗಳನ್ನು ಓದುವ ಹವ್ಯಾಸದಿಂದ ಜ್ಞಾನ ವೃದ್ಧಿಸಿಕೊಳ್ಳಬಹುದು ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಮುನಿರಾಜು ಹೇಳಿದರು.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪತ್ರಿಕೋದ್ಯಮ ರಂಗದಲ್ಲಿ ಅವಕಾಶಗಳು ಹೆಚ್ಚು, ವಿದ್ಯಾರ್ಥಿಗಳು ಕೌಶಲ್ಯ ಅಭಿವೃದ್ಧಿ ಹೊಂದುವುದರ ಮೂಲಕ ಪತ್ರಿಕೋದ್ಯಮ ವೃತ್ತಿಯಲ್ಲಿ ಮುಂದುವರೆಯಬಹುದು ಎಂದರು.
ಪತ್ರಿಕೋದ್ಯಮ ಶಿಕ್ಷಣ ಗಟ್ಟಿಗೊಳಿಸಲು ಮುಂಬರುವ ದಿನಗಳಲ್ಲಿ ವಿವಿಯಲ್ಲಿ ಸುಸಜ್ಜಿತ ಸ್ಟುಡಿಯೋ ಹಾಗೂ ಅತ್ಯಾಧುನಿಕ ಉಪಕರಣಗಳನ್ನು ಒದಗಿಸುತ್ತೇವೆ ಎಂದು ಭರವಸೆ ನೀಡಿದರು.
ಕುಲಸಚಿವ ರುದ್ರೇಶ್ ಎಸ್.ಎನ್ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚು ಬರೆಯಬೇಕು. ಬರೆಯುವುದರಿಂದ ಬರವಣಿಗೆಯಲ್ಲಿನ ಲೋಪದೋಷಗಳು ಮನವರಿಕೆಯಾಗುತ್ತವೆ. ಇದರಿಂದ ಬರವಣಿಗೆಯ ಕೌಶಲ್ಯ ವೃದ್ಧಿಸುತ್ತದೆ. ಇದರ ಜೊತೆಗೆ ಮಾತನಾಡುವ ಕೌಶಲ್ಯವನ್ನು ಸಹ ಬೆಳೆಸಿಕೊಳ್ಳಬೇಕು ಎಂದರು.
ವರದಿಗಾರ ಹರಿಶಂಕರ್ ಜಿ.ಪಾಳ್ಯ ಮಾತನಾಡಿ, ತನಿಖಾ ಪತ್ರಿಕೋದ್ಯಮವನ್ನು ಆಯ್ಕೆ ಮಾಡಿಕೊಳ್ಳುವವರು ನಿರ್ಭೀತಿ ಮತ್ತು ಆಮೀಷಕ್ಕೆ ತುತ್ತಾಗದಂತೆ ಕೆಲಸ ಮಾಡುವುದು ರೂಢಿಸಿಕೊಳ್ಳಬೇಕು ಎಂದರು.
ಪತ್ರಿಕೋದ್ಯಮ ಎಂಬುದು ಹುಲಿಯ ಮೇಲಿನ ಸವಾರಿ ಇದ್ದಂತೆ. ಅಡ್ಡದಾರಿ ಹಿಡಿಯದೆ ನೈತಿಕ ಪತ್ರಿಕೋದ್ಯಮವನ್ನು ಅಂತರಾಳ ಮಾಡಿಕೊಂಡು ಕೆಲಸ ನಿರ್ವಹಿಸಿದಲ್ಲಿ ಯಾರ ಹಂಗಿಲ್ಲದೆ ಈ ಕ್ಷೇತ್ರದಲ್ಲಿ ಮುಂದುವರೆಯಬಹುದು ಎಂದರು.
ಬಳಿಕ ಪತ್ರಿಕೋದ್ಯಮ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ರಾಕೇಶ್ ವಿ.ತಾಳಿಕೋಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿಬ್ಬಂದಿ ಧನುಂಜಯ ಭಟ್ ಸ್ವಾಗತಿಸಿದರು. ಡಾ.ಜಯರಾಜ.ಹೆಚ್ ನಿರೂಪಿಸಿ ವಂದಿಸಿದರು. ಪತ್ರಿಕೋದ್ಯಮದ ವಿದ್ಯಾರ್ಥಿಗಳು ಸೇರಿದಂತೆ ವಿವಿಧ ವಿಭಾಗದ ವಿದ್ಯಾರ್ಥಿಗಳು ಹಾಜರಿದ್ದರು.



