ಬೆಂಗಳೂರು: ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ ಬೆಂಗಳೂರಿಗೆ ಹೊಸ ರೂಪವನ್ನು ನೀಡಲು ನಾನು ಈ ಉಸ್ತುವಾರಿಯ ಜವಾಬ್ದಾರಿ ತೆಗೆದುಕೊಂಡಿದ್ದೇನೆ. ಅದನ್ನು ಸಮರ್ಥವಾಗಿ ನಿಭಾಯಿಸಲು ನಾನು ಸದಾ ಸಿದ್ಧನಿದ್ದೇನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.
- ಕಲಾಗ್ರಾಮದಲ್ಲಿ ಸ್ಪರ್ಶ ಮಕ್ಕಳ ನಾಟಕೋತ್ಸವ
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
ಇತ್ತೀಚೆಗೆ ಸುರಿಯುತ್ತಿರುವ ಭಾರಿ ಮಳೆಯಿಂದ ಬೆಂಗಳೂರಿನ ಹಲವೆಡೆ ನೀರು ಸರಾಗವಾಗಿ ಹರಿಯದೆ ಸಮಸ್ಯೆ ಉಂಟಾಗಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಜಲಮಂಡಳಿ ಅಧಿಕಾರಿಗಳೊಂದಿಗೆ ನಗರ ಪ್ರದಕ್ಷಿಣೆ ನಡೆಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಮಳೆ ನೀರಿನ ಸಮಸ್ಯೆಗೆ ಶಾಶ್ವತವಾಗಿ ಪರಿಹಾರ ಒದಗಿಸಲು ನಾವು ಬದ್ಧರಾಗಿದ್ದು, ಈ ನಿಟ್ಟಿನಲ್ಲಿ ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಮಾನ್ಯತಾ ಟೆಕ್ ಪಾರ್ಕ್ ದೊಡ್ಡ ಜಂಕ್ಷನ್ ಆಗಿದ್ದು, ಇಲ್ಲಿಂದಲೇ ಸಮಸ್ಯೆ ಶುರುವಾಗುತ್ತಿದೆ. ಮಳೆ ನೀರು ಹರಿಯುವುದನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ. ಅಧಿಕಾರಿಗಳಿಗೆ ಸ್ಪಂದಿಸದೇ ಕೆಲವರು ತಡೆಯಾಜ್ಞೆ ತಂದಿದ್ದರು. ಹಾಗಾಗಿ ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕಾಗಿದೆ ಎಂದರು.
ನಮಗೆ ಯಾರ ಆಸ್ತಿಯನ್ನು ಹಾಳು ಮಾಡಲು ಇಷ್ಟವಿಲ್ಲ. ಹರಿಯುವ ನೀರನ್ನು ನಿಲ್ಲಿಸಲು ಸಾಧ್ಯವಿಲ್ಲ. ಸಮಸ್ಯೆಗಳ ಗಂಭೀರತೆಯನ್ನು ಅರಿತು, ಖುದ್ದಾಗಿ ನಾನೇ ಬಂದು ಸ್ಥಳ ಪರಿಶೀಲನೆ ನಡೆಸಿದ್ದೇನೆ. ಅಡಚಣೆ ಮಾಡಿದವರು ಸ್ಪಂದಿಸುವುದಾಗಿ ಒಪ್ಪಿಕೊಂಡಿದ್ದಾರೆ. ಯಾರ ಕಟ್ಟಡವನ್ನು ಒಡೆಯುವುದು ನಮ್ಮ ಉದ್ದೇಶವಲ್ಲ. ಯಾರಿಗೂ ತೊಂದರೆ ಆಗದಂತೆ ನೀರಿನ ಹರಿವನ್ನು ಸರಾಗಗೊಳಿಸಲು ಅಧಿಕಾರಿಗಳು ಕೆಲಸ ಮಾಡಲಿದ್ದು, ಅಗತ್ಯ ಸಲಹೆ ಸೂಚನೆಗಳನ್ನು ಸೂಚಿಸಿದ್ದಾರೆ ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.




