ಬೆಂಗಳೂರು: ಪಾಕಿಸ್ತಾನ ಯಾವತ್ತಿಗೂ ನಮ್ಮ ಶತ್ರು ದೇಶವಾಗಿದೆ. ಕೇಂದ್ರ ಸರಕಾರ ಪಾಕಿಸ್ತಾನದ ಮೇಲೆ ಯುದ್ಧ ಸಾರಲಿ ನನಗೆ ಕೇಂದ್ರ ಸರ್ಕಾರ ಅನುಮತಿ ನೀಡಿದರೆ ಸೂಸೈಡ್ ಬಾಂಬ್ ಜೊತೆ ಪಾಕಿಸ್ತಾನಕ್ಕೆ ಒಬ್ಬನೇ ಹೋಗಲು ಸಿದ್ದ, ಇದಕ್ಕೆ ಅಲ್ಲಾನ ಮೇಲಾಣೆ ಎಂದು ಕರ್ನಾಟಕ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನನಗೆ ಅವಕಾಶ ನೀಡಿದರೆ, ಪಾಕಿಸ್ತಾನದ ವಿರುದ್ಧ ಯುದ್ಧಕ್ಕೆ ನಾನೇ ಹೋಗುವೆ. ಪಾಕಿಸ್ತಾನಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದೆಂದಿಗೂ ಅದು ನಮ್ಮ ಶತ್ರುದೇಶ ಎಂದರು.
ಕೇಂದ್ರ ಸರಕಾರ ಪಾಕಿಸ್ತಾನದ ಮೇಲೆ ಯುದ್ಧ ಸಾರಲಿ. ಮೋದಿ, ಅಮಿತ್ ಶಾ ಮತ್ತು ಕೇಂದ್ರ ಸರಕಾರ ನನಗೆ ಅವಕಾಶ ಕೊಡಲಿ, ನಾನು ಯುದ್ಧ ಮಾಡೋದಕ್ಕೆ ಸಿದ್ಧ. ಅಗತ್ಯ ಬಿದ್ದರೆ ಸುಸೈಡ್ ಬಾಂಬ್ ಜೊತೆಗೆ ನಾನು ಹೋಗುತ್ತೇನೆ ಎಂದರು.




