ದಾವಣಗೆರೆ: ದಾವಣಗೆರೆ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್ ಕೌಲಾಪೂರೆ ಅವರು ಜಗಳೂರು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಜೂನ್ 13 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ಸಲ್ಲಿಸಿದ ಅರ್ಜಿಗಳನ್ನು ವಿಲೇ ಮಾಡದೇ ಬಾಕಿ ಇಟ್ಟಿದಲ್ಲಿ ಅಂತಹ ದೂರುಗಳನ್ನು ಸಲ್ಲಿಸಬಹುದೆಂದು ತಿಳಿಸಿದ್ದಾರೆ.




