ಬಳ್ಳಾರಿ: ಸರ್ಕಾರದ ಇಡಿಸಿಎಸ್ ನಿರ್ದೇಶನಾಲಯದ ಇ-ಆಡಳಿತ ಇಲಾಖೆಯ ನಿರ್ದೇಶನದಂತೆ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಸೇವಾ ಕೇಂದ್ರಗಳಿಗೆ ಫ್ರಾಂಚೈಸಿಗಳನ್ನು ನೇಮಕ ಮಾಡಲು ಆಸಕ್ತ ಅರ್ಹ ಆಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಜಿಲ್ಲೆಯ ಬಳ್ಳಾರಿ ತಾಲ್ಲೂಕಿನ ಶಿಡಗಿನಮೊಳ ಮತ್ತು ಸಂಡೂರು ತಾಲ್ಲೂಕಿನ ಭುಜಂಗನಗರ ಗ್ರಾಮ ಪಂಚಾಯತಿಯ 02 ಗ್ರಾಮ – ಒನ್ ಕೇಂದ್ರಗಳಿಗೆ ಫ್ರಾಂಚೈಸಿಯನ್ನು ನೇಮಕ ಮಾಡಲು ಉದ್ದೇಶಿಸಲಾಗಿದೆ.
ಖಾಲಿಯಿರುವ ಗ್ರಾಮ ಒನ್ ಕೇಂದ್ರಗಳ ವಿವರ ಮತ್ತು ಅರ್ಜಿ ಸಲ್ಲಿಸಲು https://kal-mys.gramaone.karnataka.gov.in/ ಗೆ ಭೇಟಿ ನೀಡಬಹುದು. ನಾಗರೀಕ ಸೇವಾ ಕೇಂದ್ರ ಗ್ರಾಮ ಒನ್ ಫ್ರಾಂಚೈಸಿಯನ್ನು ಬಯಸುವವರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ ಆಗಿದೆ.



