ಬಳ್ಳಾರಿ: ಸರ್ಕಾರದ ಇಡಿಸಿಎಸ್ ನಿರ್ದೇಶನಾಲಯದ ಇ-ಆಡಳಿತ ಇಲಾಖೆಯ ನಿರ್ದೇಶನದಂತೆ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಸೇವಾ ಕೇಂದ್ರಗಳಿಗೆ ಫ್ರಾಂಚೈಸಿಗಳನ್ನು ನೇಮಕ ಮಾಡಲು ಆಸಕ್ತ ಅರ್ಹ ಆಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ಜಿಲ್ಲೆಯ 11 ಗ್ರಾಮ – ಒನ್ ಕೇಂದ್ರಗಳಿಗೆ ಫ್ರಾಂಚೈಸಿಯನ್ನು ನೇಮಕ ಮಾಡಲು ಉದ್ದೇಶಿಸಲಾಗಿದೆ. ಬಳ್ಳಾರಿ ತಾಲ್ಲೂಕಿನ ಶಂಕರಬಂಡೆ, ಕಂಪ್ಲಿ ತಾಲ್ಲೂಕಿನ ದೇವಸಮುದ್ರ, ಕುರುಗೋಡು ತಾಲ್ಲೂಕಿನ ಬಾದನಹಟ್ಟಿ ಮತ್ತು ಸಂಡೂರು ತಾಲ್ಲೂಕಿನ ಅಂತಾಪುರ, ಬನ್ನಿಹಟ್ಟಿ, ಭುಜಂಗನಗರ, ಸುಶೀಲನಗರ, ಯಶವಂತನಗರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಖಾಲಿಯಿರುವ ಗ್ರಾಮ ಒನ್ ಕೇಂದ್ರಗಳ ವಿವರ ಮತ್ತು ಅರ್ಜಿ ಸಲ್ಲಿಸಲು https://kal-mys.gramaone.karnataka.gov.in/ ಗೆ ಭೇಟಿ ನೀಡಬಹುದು. ನಾಗರೀಕ ಸೇವಾ ಕೇಂದ್ರ ಗ್ರಾಮ ಒನ್ ಫ್ರಾಂಚೈಸಿಯನ್ನು ಬಯಸುವವರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಡಿಸೆಂಬರ್ 15 ಆಗಿರುತ್ತದೆ.




