ಬೆಂಗಳೂರು: ಮಹಾರಾಷ್ಟ್ರ ಗಡಿಯಲ್ಲಿರುವ ಕನ್ನಡ ಶಾಲೆಗಳಿಗೆ ಮರಾಠಿ ಭಾಷಾ ಶಿಕ್ಷಕರನ್ನು ಮಹಾರಾಷ್ಟ್ರ ಸರ್ಕಾರ ನೇಮಕ ಮಾಡಿರುವ ವಿಷಯವನ್ನು ಕರ್ನಾಟಕ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ರಾಜ್ಯದ ವಿವಿಧ ಅಕಾಡೆಮಿ ಮತ್ತು ಪ್ರಾಧಿಕಾರದ ಅಧ್ಯಕ್ಷರೊಂದಿಗೆ ಸಮಾಲೋಚನೆ ಸಭೆ ನಡೆಸಿದ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ಸರ್ಕಾರ ಗಡಿ ಭಾಗದ ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನು ನೇಮಿಸಿರುವ ಕುರಿತು ಈಗಾಗಲೇ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಲ್ಲಿನ ಸರ್ಕರಕ್ಕೆ ಪತ್ರ ಬರೆದಿದೆ. ಸರ್ಕಾರವೂ ಗಮನಹರಿಸಿದೆ ಎಂದರು.
ಮಹಾರಾಷ್ಟ್ರ ಸರ್ಕಾರದ ಈ ಕ್ರಮ ಗಡಿ ಪ್ರದೇಶದ ಕನ್ನಡ ಶಾಲೆಗಳ ಅಸ್ತಿತ್ವಕ್ಕೆ ಧಕ್ಕೆ ತರುವ ರೀತಿಯಲ್ಲಿ ಇದೆ. ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿರುವ ಈ ನಿರ್ಧಾರದ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಗಡಿ ಭಾಗದ ಕನ್ನಡ ಶಾಲೆಗಳು, ಆ ಪ್ರದೇಶಗಳ ಅಭಿವೃದ್ಧಿಗೆ ಶ್ರಮಿಸಲಾಗುವುದು. ಗಡಿನಾಡ ಉತ್ಸವಗಳನ್ನು ಹಮ್ಮಿಕೊಳ್ಳಲು ಕ್ರಮಕೈಗೊಳ್ಳಲಾಗುವುದು. ಬೆಂಗಳೂರು ಸೇರಿದಂತೆ ಕನ್ನಡ ನಾಮಫಲಕ ಕಡ್ಡಾಯಕ್ಕೆ ಇರುವ ಎಲ್ಲ ಅಡೆತಡೆ ನಿವಾರಿಸಿ, ಅನುಷ್ಠಾನಗೊಳಿಸಲಾಗುವುದು ಎಂದರು.
ಕನ್ನಡ ಸಂಸ್ಕೃತಿ ಇಲಾಖೆಯಡಿ ಬರುವ ಅಕಾಡೆಮಿ, ಪ್ರಾಧಿಕಾರಗಳ ಸುಗಮ ಕಾರ್ಯ ನಿರ್ವಹಣೆಗಾಗಿ ಎಲ್ಲ ಅಧ್ಯಕ್ಷರನ್ನೂ ಒಳಗೊಂಡ ಸಮನ್ವಯ ಸಮಿತಿ ರಚಿಸಲಾಗುವುದು. ಅಕಾಡೆಮಿ-ಪ್ರಾಧಿಕಾರಗಳ ಅಧ್ಯಕ್ಷರಲ್ಲೇ ಒಬ್ಬರನ್ನು ಸಮನ್ವಯ ಸಮಿತಿ ಅಧ್ಯಕ್ಷರನ್ನಾಗಿ ಮಾಡುವ ಅಥವಾ ಸಚಿವರೇ ಅಧ್ಯಕ್ಷರಾಗುವ ಕುರಿತು ಶೀಘ್ರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
ಪ್ರತಿ ತಿಂಗಳು ಕನಿಷ್ಠ ಎರಡು ಅಕಾಡೆಮಿಗಳ ಅಧ್ಯಕ್ಷರು, ಸದಸ್ಯರನ್ನು ಕರೆದು ಸಭೆ ನಡೆಸಲಾಗುವುದು. ಸಂವಿಧಾನದ ಆಶಯಗಳಿಗೆ ಪೂರಕವಾಗಿ ವೈವಿಧ್ಯಮಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು. ಅಕಾಡೆಮಿಗಳ ಪತ್ರ ವ್ಯವಹಾರದಲ್ಲಿ ‘ಕರ್ನಾಟಕ’ ಎಂದು ನಾಮಕರಣಗೊಂಡ ಸುವರ್ಣ ವರ್ಷದ ಲೋಗೊ ಕಡ್ಡಾಯವಾಗಿ ಬಳಸಲು ಸೂಚಿಸಲಾಗಿದೆ ಎಂದರು.




