ಬೆಳಗಾವಿ: ಸಾರಿಗೆ ಇಲಾಖೆಯಲ್ಲಿ ಖಾಲಿಯಿರುವ ಸಿಬ್ಬಂದಿ ನೇಮಕಾತಿಗೆ ಸರ್ಕಾರ ಪ್ರಕ್ರಿಯೆ ಆರಂಭಿಸಿದೆ. ಸದ್ಯ ಒಟ್ಟು 9 ಸಾವಿರ ಸಿಬ್ಬಂದಿ ನೇಮಕಕ್ಕೆ ಆರ್ಥಿಕ ಇಲಾಖೆ ಅನುಮತಿ ನೀಡಿದ್ದು, ಇದರಲ್ಲಿ 4 ಸಾವಿರ ಸಿಬ್ಬಂದಿ ನೇಮಕ ಪ್ರಕ್ರಿಯೆ ಶುರುವಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್, ವಿಧಾನಪರಿಷತ್ ನಲ್ಲಿ ತಿಳಿಸಿದರು.
- ಆ್ಯಕ್ಸಿಡೆಂಟಲ್ ಸಿಎಂ ಬೊಮ್ಮಾಯಿ ಅವರೇ ಹಾವೇರಿ ಕ್ಷೇತ್ರದ ಬಗ್ಗೆ ಗಮನ ಕೊಡಿ: ಬಿ ಕೆ ಹರಿಪ್ರಸಾದ್
- 40 ದಾಟಿದ ಪುರುಷರ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ಹೇಗೆ?
- ಸಂಗೀತ ಬಾರ್ & ರೆಸ್ಟೋರೆಂಟ್ ಚಿತ್ರದ ಟೀಸರ್ ಬಿಡುಗಡೆಗೆ ಮುಹೂರ್ತ ನಿಗದಿ
- ಅನರ್ಹ ಕಂಪನಿಗೆ ಕಸದ ಟೆಂಡರ್: ಆರ್.ಅಶೋಕ
- ಮಾಂಜಾ ದಾರ ಮಾರಾಟ, ಬಳಕೆ ನಿಷೇಧಕ್ಕೆ ಕಠಿಣ ಕ್ರಮ: ಡಾ.ಜಿ.ಪರಮೇಶ್ವರ್
ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಎಸ್.ವಿ.ಸಂಕನೂರ ಅವರ ಪ್ರಶ್ನೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಪರವಾಗಿ ಉತ್ತರಿಸಿದ ಅವರು, ಸಾರಿಗೆ ಇಲಾಖೆಯಿಂದ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಬೇಕೆಂಬ ಬೇಡಿಕೆ ಇತ್ತು. ಇದಕ್ಕೆ ಸರ್ಕಾರ ಸಮ್ಮತಿ ನೀಡಿದೆ. ಪ್ರಾರಂಭದಲ್ಲಿ ಒಟ್ಟು 9 ಸಾವಿರ ಸಿಬ್ಬಂದಿ ನೇಮಕಾತಿಗೆ ಅರ್ಥಿಕ ಇಲಾಖೆ ಅನುಮೋದನೆ ನೀಡಿದೆ. ಇದರಲ್ಲಿ 4 ಸಾವಿರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಪ್ರಕ್ರಿಯೆ ಮುಂದುವರೆದಿದೆ ಎಂದರು.
ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಗೆ ಬಂದ ನಂತರ ಸಾರಿಗೆ ಇಲಾಖೆಗೆ ಪ್ರತಿ ದಿನ 16 ಕೋಟಿ ಲಾಭ ಬರುತ್ತಿದೆ. 375 ಕೋಟಿ ಜಿಎಸ್ಟಿಗೆ ಸಂದಾಯವಾಗುತ್ತದೆ. ಶೇ.5ರಷ್ಟು ಮಹಿಳಾ ಉದ್ಯೋಗಗಳು ಏರಿಕೆಯಾಗಿವೆ. ಬೆಂಗಳೂರು ಭಾಗದಲ್ಲಿ ಉದ್ಯೋಗಸ್ಥ ಮಹಿಳೆಯರು 1100ರಿಂದ 1200ರವರೆಗೆ ಲಾಭವನ್ನು ಪಡೆಯುತ್ತಿದ್ದಾರೆ. ಇದು ನಮ್ಮ ಸರ್ಕಾರದ ಸಾಧನೆ ಎಂದರು.
ಶಕ್ತಿ ಯೋಜನೆ ಜಾರಿಗೆ ಬರುವ ಮುನ್ನ ಪ್ರತಿ ದಿನ 96 ಲಕ್ಷ ಮಂದಿ ಬಸ್ಸುಗಳಲ್ಲಿ ಪ್ರಯಾಣ ಮಾಡುತ್ತಿದ್ದರು. ಈ ಯೋಜನೆ ಆರಂಭವಾದ ನಂತರ 1.16 ಲಕ್ಷ ಮಂದಿ ಪ್ರಯಾಣಿಸುತ್ತಿದ್ದಾರೆ. ಈಗ ಪ್ರಸ್ತುತ ಇದು 1.33 ಕೋಟಿಗೆ ಏರಿಕೆಯಾಗಿದೆ. ಇದರಲ್ಲಿ 60 ಲಕ್ಷ ಮಹಿಳೆಯರೇ ಎಂಬುದು ವಿಶೇಷ ಎಂದರು.
ಇಲಾಖೆಯ ವಿವಿಧ ನಿಗಮಗಳಿಗೆ 1346 ಹೊಸ ಬಸ್ ಗಳ ಖರೀದಿ ಪ್ರಕ್ರಿಯೆಯನ್ನು ಪ್ರಸಕ್ತ ಹಣಕಾಸು ವರ್ಷದಲ್ಲಿ ಪೂರ್ಣಗೊಳಿಸಲಾಗುವುದು. ಈಗಾಗಲೇ 1304 ಬಸ್ ಗಳನ್ನು ಖರೀದಿಸಲಾಗಿದೆ. ಉಳಿದಿರುವ ಬಸ್ಸುಗಳನ್ನು ಆರ್ಥಿಕ ಇಲಾಖೆ ಅನುಮೋದನೆ ಪಡೆದು ಖರೀದಿಸುತ್ತೇವೆ ಎಂದರು.




