ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿ
ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶ
ಬಳ್ಳಾರಿ: ನಗರದಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ನ.16 ಮತ್ತು 16 ರಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಹೈದ್ರಾಬಾದ್-ಕರ್ನಾಟಕ ವೃಂದದ 97 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರ ಸುತ್ತಲೂ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ 2023ರ ಕಲಂ 163 ರ ಮೇರೆಗೆ ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ನ.16 ರಂದು ನಗರದ 16 ಪರೀಕ್ಷಾ ಕೇಂದ್ರಗಳಲ್ಲಿ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ನ.17 ರಂದು ನಗರದ 20 ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ.
ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಇರುವ ಜೆರಾಕ್ಸ್, ಇಂಟರ್‌ನೆಟ್ ಸೆಂಟರ್‌ಗಳು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಲು ಆದೇಶಿಸಿದ್ದು, ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ.
ಈ ಆದೇಶ ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.




