ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಸುಧಾರಣೆ ಹಾಗೂ ಪಾರದರ್ಶಕತೆ ತರಬೇಕಾಗಿರುವ ಕಾರಣ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಇಲಾಖೆಯಲ್ಲಿನ ವರ್ಗಾವಣೆಗೆ ಹೊಸ ನಿಯಮಗಳನ್ನು ರೂಪಿಸಲಾಗಿದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ತಿಳಿಸಿದ್ದಾರೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಅಬಕಾರಿ ಇಲಾಖೆಯ ವರ್ಗಾವಣೆ ನಿಯಮಗಳನ್ನು ಮಾರ್ಪಾಡು ಮಾಡುವ ಮೂಲಕ ಪಾರದರ್ಶಕ ಮತ್ತು ನಿಯಮಾಧಾರಿತ ವರ್ಗಾವಣೆ ಪದ್ದತಿಯನ್ನು ಜಾರಿಗೊಳಿಸುವುದರಿಂದ ಇತರೆ ಪ್ರಭಾವಗಳಿಗೆ ಒಳಗಾಗುವುದನ್ನು ತಡೆಗಟ್ಟಲು ಸಾಧ್ಯ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದಕ್ಕಾಗಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರಡು ನಿಯಮಾವಳಿಗೆ ಒಪ್ಪಿಗೆ ನೀಡಲಾಗಿದೆ. ಈ ಕರಡು ನಿಯಮಾವಳಿ ಪ್ರಕಟಿಸಿ, ಸಂಬಂಧಪಟ್ಟವರಿಂದ ಆಕ್ಷೇಪಣೆ ಅಥವಾ ಸಲಹೆಗಳನ್ನು ಆಹ್ವಾನಿಸಲಾಗುವುದು ಎಂದಿದ್ದಾರೆ.
ಅಬಕಾರಿ ಇಲಾಖೆಯಲ್ಲಿನ ಹುದ್ದೆಗಳನ್ನು ಕಾರ್ಯನಿರ್ವಾಹಕ ಮತ್ತು ಕಾರ್ಯನಿರ್ವಾಹಕೇತರ ಎಂದು ವಿಂಗಡಿಸಿ, ಅಬಕಾರಿ ನಿರೀಕ್ಷಕರು, ಅಬಕಾರಿ ಉಪನಿರೀಕ್ಷಕರು, ಅಬಕಾರಿ ಮುಖ್ಯಪೇದೆ ಮತ್ತು ಅಬಕಾರಿ ಪೇದೆಗಳ ವರ್ಗಾವಣೆಯನ್ನು ಕೌನ್ಸೆಲಿಂಗ್ ಮೂಲಕ ಮಾಡಲು ನಿರ್ಧರಿಸಲಾಗಿದೆ. ಅಲ್ಲದೇ, ಒಬ್ಬ ಅಧಿಕಾರಿ ಅಥವಾ ಸಿಬ್ಬಂದಿಯನ್ನು ಸತತವಾಗಿ ಎರಡಕ್ಕಿಂತ ಹೆಚ್ಚು ಅವಧಿಗೆ ಕಾರ್ಯ ನಿರ್ವಾಹಕ ಹುದ್ದೆಗೆ ವರ್ಗಾಯಿಸುವಂತಿಲ್ಲ. ಅಧಿಕಾರಿಗಳನ್ನು ಕಡ್ಡಾಯವಾಗಿ ವರ್ಗಾವಣೆ ಮಾಡಲಾಗುವುದು ಎಂದಿದ್ದಾರೆ.
ಕಳೆದ 5 ವರ್ಷಗಳಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿನ ಕಾರ್ಯನಿರ್ವಾಹಕ ಹುದ್ದೆಯಲ್ಲಿ ಕಾರ್ಯ ನಿರ್ವಹಿಸಿದ ಅಬಕಾರಿ ಜಂಟಿ ಆಯುಕ್ತರು, ಉಪ ಆಯುಕ್ತರು, ಅಧೀಕ್ಷಕರು, ನಿರೀಕ್ಷಕರು ಮತ್ತು ಉಪ ನಿರೀಕ್ಷಕರುಗಳನ್ನು ಆಯಾ ಜಿಲ್ಲೆಗಳನ್ನು ಹೊರತು ಪಡಿಸಿ ಇತರೆ ಜಿಲ್ಲೆಗಳಿಗೆ ವರ್ಗಾಯಿಸಲು ಹೊಸ ನಿಯಮದಲ್ಲಿ ಉಲ್ಲೇಖಿಸಲಾಗಿದೆ ಎಂದಿದ್ದಾರೆ.



