ಜನಸ್ನೇಹಿ ಆಡಳಿತದ ಭಾಗವಾಗಿ ಹೊಸ ಉಪಕ್ರಮ
ಎನಿವೇರ್ ರಿಜಿಸ್ಟ್ರೇಷನ್ ಬೆನ್ನಿಗೆ ಇಲಾಖೆಯಿಂದ ಮತ್ತೊಂದು ಪ್ರಮುಖ ಹೆಜ್ಜೆ
ಬೆಂಗಳೂರು: ಜನರಿಗೆ ಸುಗಮ ಆಡಳಿತ ನೀಡುವ ಭಾಗವಾಗಿ ಅಕ್ಟೋಬರ್ 21 ರ ನಂತರ ನೋಂದಣಿ ಕಚೇರಿಗಳು ಶನಿವಾರ-ಭಾನುವಾರದ ರಜೆ ದಿನಗಳಲ್ಲೂ ಕಾರ್ಯನಿರ್ವಹಿಸಲಿವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ ಅವರು, ದುಡಿಯುವ ಮಧ್ಯಮ ವರ್ಗದ ಜನ ವಾರದ ದಿನಗಳಲ್ಲಿ ತಮ್ಮ ಕೆಲಸಗಳನ್ನು ಬಿಟ್ಟು ನೋಂದಣಿ ಕಚೇರಿಗಳಿಗೆ ಆಗಮಿಸುವುದು ಕಷ್ಟ. ಅಲ್ಲದೆ, ನೋಂದಣಿಗಾಗಿ ಹೊರ ರಾಜ್ಯದಿಂದ ಆಗಮಿಸುವವರಿಗೂ ಅನಾನುಕೂಲ ಉಂಟಾಗುತ್ತಿದೆ. ಹೀಗಾಗಿ ದುಡಿಯುವ ವರ್ಗದ ಜನರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಎರಡನೇ-ನಾಲ್ಕನೇ ಶನಿವಾರ ಹಾಗೂ ಭಾನುವಾರಗಳಲ್ಲೂ ನೋಂದಣಿ ಕಚೇರಿಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದರು.
ಅಕ್ಟೋಬರ್ 21ರ ನಂತರ ಪ್ರತಿ ನೋಂದಣಿ ಜಿಲ್ಲೆಗಳಲ್ಲಿ ಒಂದು ರಿಜಿಸ್ಟ್ರಾರ್ ಕಚೇರಿ ಶನಿವಾರ ಭಾನುವಾರ ರಜಾ ದಿನಗಳಲ್ಲೂ ಕಾರ್ಯನಿರ್ವಹಿಸಲಿವೆ. ರಜೆ ದಿನಗಳಲ್ಲಿ ಯಾವ ನೋಂದಣಿ ಕಚೇರಿ ಕಾರ್ಯನಿರ್ವಹಿಸಲಿವೆ ಎಂದು ಅವಧಿಗೆ ಮೊದಲೇ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ನೋಂದಣಿಗಾಗಿ ಸಾರ್ವಜನಿಕರು ಅರ್ಜಿ ಹಾಕಿದಾಗ ಯಾವ ಕಚೇರಿ ತೆರೆದಿರುತ್ತದೆ ಎಂಬ ಮಾಹಿತಿಯನ್ನು ಆನ್ಲೈನ್ ಮೂಲಕ ನೀಡಲಾಗುತ್ತದೆ ಎಂದರು.
ಶನಿವಾರ-ಭಾನುವಾರಗಳಲ್ಲೂ ನೋಂದಣಿ ಕಚೇರಿಗಳನ್ನು ತೆರೆಯಬೇಕು ಎಂಬ ಒತ್ತಾಯ ಈ ಹಿಂದಿನಿಂದಲೂ ಇತ್ತು. ಅಲ್ಲದೆ, ಬಜೆಟ್ ವೇಳೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಇಲಾಖೆಗೆ ಸೂಚನೆ ನೀಡಿದ್ದರು. ಹೀಗಾಗಿ ಇದಕ್ಕೆ ಬೇಕಾದಂತೆ ಕಾನೂನುಗಳನ್ನು ತಿದ್ದುಪಡಿ ಮಾಡಿ, ಈ ಬಗ್ಗೆ ಕ್ಯಾಬಿನೆಟ್ ನಿಂದಲೂ ಒಪ್ಪಿಗೆ ಪಡೆಯಲಾಗಿದೆ ಎಂದರು.




