ಧಾರವಾಡ: ತೋಟಗಾರಿಕೆ ಇಲಾಖೆ, ಧಾರವಾಡ ಹಾಗೂ ಪ್ರಾದೇಶಿಕ ತೋಟಗಾರಿಕಾ ಸಂಶೋಧನಾ ಮತ್ತು ವಿಸ್ತರಣೆ ಕೇಂದ್ರ (ಕುಂಬಾಪೂರ ಫಾರ್ಮ) ಇವರ ಸಹಯೋಗದೊಂದಿಗೆ ರೈತರ ಸರ್ವತೋಮುಖ ಅಭಿವೃದ್ಧಿಗಾಗಿ ಜೇನು ಕೃಷಿ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ನವೆಂಬರ್ 14, 2025 ರಂದು ಹಮ್ಮಿಕೊಳ್ಳಲಾಗಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ವಿಶೇಷವಾಗಿ ವೈಜ್ಞಾನಿಕ ಜೇನು ಸಾಕಾಣಿಕೆ, ಜೇನಿನ ಉತ್ಪನ್ನಗಳು, ರಾಣಿ ಕಣಗಳ ಉತ್ಪಾದನೆ, ಇಳುವರಿ ಹೆಚ್ಚಿಸಲು ಜೇನು ನೊಣಗಳ ಪಾತ್ರ, ಸ್ಥಳಾಂತರ ಜೇನು ಕೃಷಿ ಹಾಗೂ ಜೇನಿನ ಶತ್ರುಗಳ ನಿರ್ವಹಣೆ, ಜೇನು ಸಾಕಾಣಿಕೆಯ ಪ್ರಾತ್ಯಕ್ಷಿಕೆ ಅಳ್ನಾವರದ ಮಧುವನ ಕೇಂದ್ರದಲ್ಲಿ ನೀಡಲಾಗುವುದು.
ಆಸಕ್ತ ರೈತರು ಮೊಬೈಲ್ ಸಂಖ್ಯೆ:9353895519 ಗೆ ನವೆಂಬರ್ 12, 2025 ರೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು.




