ದಾವಣಗೆರೆ: ಆಸ್ತಿಗಳ ನೋಂದಣಿಯನ್ನು ಯಾವ ಸ್ಥಳದಲ್ಲಾದರೂ ಮಾಡಿಸಲು ಅವಕಾಶ ಕಲ್ಪಿಸಿದ್ದು ಸೆಪ್ಟೆಂಬರ್ 2 ರಿಂದ ಜಿಲ್ಲೆಯೊಳಗೆ ಯಾವುದೇ ತಾಲ್ಲೂಕಿನಲ್ಲಿ ನೋದಣಿ ಮಾಡಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.
- ಎಲ್ಇಡಿ ಬೀದಿ ದೀಪ ಯೋಜನೆ ಅನುಷ್ಠಾನಗೊಂಡರೆ ಶೇ.61.01 ರಷ್ಟು ವಿದ್ಯುತ್ ಉಳಿತಾಯ: ಕೃಷ್ಣ ಬೈರೇಗೌಡ
- ಋಗ್ವೇದದ ಮಹತ್ವ ಮತ್ತು ಅಪೌರುಷೇಯ ತತ್ವದ ವಿಶ್ಲೇಷಣೆ
- ಸುರೇಶ್ ಕುಮಾರ್ ರಿಂದ ಕಾಂಗ್ರೆಸ್ ವಿರುದ್ದ ‘ಸಂವಿಧಾನಿಕ’ ಪೊಳ್ಳು ವಾದ !
- ಬುದ್ಧಿಜೀವಿ ನಟ ಎಂದು ಕರೆಯಲ್ಪಡುವ ಅನಂತನಾಗ್ ಅವರೊಂದಿಗಿನ ಒಂದು ಪ್ರಸಂಗ
- ಆರ್ಎಸ್ಎಸ್ ಮುಖ್ಯಸ್ಥರ ಪ್ರಕಾರ ಹಿಂದೂಗಳ ವಿಧಗಳು
ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದ್ದು, ಆದರ ಎನಿವೇರ್ ನೋಂದಣಿಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದು ಎಂದಿದ್ದಾರೆ.
ಎನಿವೇರ್ ನೋಂದಣಿ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವು ರೀತಿಯಲ್ಲಿ ಉಪಯುಕ್ತವಾಗಿದ್ದು ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ನೋಂದಣಿಯಲ್ಲಿ ವಿಳಂಬವನ್ನು ತಡೆಗಟ್ಟುತ್ತದೆ, ಸಾರ್ವಜನಿಕರು ಸಮೀಪದಲ್ಲಿರುವ ಉಪನೋಂದಣಿ ಕಚೇರಿಯಲ್ಲಿ ದಸ್ತಾವೇಜನ್ನು ನೋಂದಾಯಿಸಬಹುದು ಎಂದಿದ್ದಾರೆ.
ಸ್ಲಾಟ್ ಲಭ್ಯವಿರುವಂತಹ ಕಚೇರಿಯನ್ನು ನೋಂದಣಿಗೆ ಆಯ್ಕೆ ಮಾಡಿಕೊಳ್ಳಬಹುದು, ನೋಂದಣಿ ಪ್ರಕ್ರಿಯೆ ಸುಲಭವಾಗುವುದಲ್ಲದೆ ಸಮಯ ಸಹ ಉಳಿಯುತ್ತದೆ, ಉಪನೋಂದಣಿ ಕಚೇರಿಗಳಲ್ಲಿ ಜನದಟ್ಟಣೆ ಕಡಿಮೆಯಾಗುತ್ತದೆ. ಕಚೇರಿ ಸಿಬ್ಬಂದಿ ಮೇಲೆ ಕೆಲಸದ ಒತ್ತಡ ಕಡಿಮೆಯಾಗುತ್ತದೆ ಹಾಗೂ ಕಚೇರಿಗಳಲ್ಲಿ ನೋಂದಣಿ ಕೆಲಸ ಸಮಾನವಾಗಿ ಹಂಚಿಕೆಯಾಗುತ್ತದೆ ಎಂದಿದ್ದಾರೆ.
ಸಾರ್ವಜನಿಕರು ಎನಿವೇರ್ ನೋಂದಣಿಯ ಸದುಪಯೋಗಪಡಿಸಿಕೊಂಡು ತಮಗೆ ಹತ್ತಿರದ ಅಥವಾ ನೋಂದಣಿಗೆ ಸ್ಲಾಟ್ ಲಭ್ಯವಿರುವಂತಹ ಕಚೇರಿ ಆಯ್ಕೆ ಮಾಡಿಕೊಂಡು ನೋಂದಣಿ ಮಾಡಿಸಬಹುದಾಗಿದೆ ಎಂದು ತಿಳಿಸಿದ್ದಾರೆ.




