ಬೆಂಗಳೂರು: ಬೆಂಗಳೂರು ಸೇರಿ ಮಹಾನಗರ ಪಾಲಿಕೆ ವ್ಯಾಪ್ತಿಯ ನೋಂದಣಿ ಕಚೇರಿಗಳನ್ನು ಭಾನುವಾರವೂ ಸಹಿತ ಕಾರ್ಯನಿರ್ವಹಿಸುವಂತೆ ಆದೇಶ ಮಾಡಲಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನೇಕ ಜನರು ನೋಂದಣಿಗಾಗಿ ತಮ್ಮ ಕೆಲಸ ಕಾರ್ಯಗಳಿಗೆ ರಜಾ ಹಾಕಿ ಬರಬೇಕಾಗುತ್ತದೆ. ನಗರ ಪ್ರದೇಶಗಳಲ್ಲಿ ಇದರಿಂದ ಕೆಲವರಿಗೆ ಅನಾನುಕೂಲವೂ ಆಗುತ್ತಿದೆ. ಆದ್ದರಿಂದ ಒಂದು ಕಂದಾಯ ಜಿಲ್ಲೆಯಲ್ಲಿ ಕನಿಷ್ಠ 6-7 ನೋಂದಣಾ ಕಚೇರಿಗಳು ಇರುತ್ತವೆ ಎಂದರು.
ರೋಸ್ಟರ್ ಆಧಾರದ ಮೇಲೆ ಒಂದೊಂದು ವಾರ ಒಂದೊಂದು ನೋಂದಣಾಧಿಕಾರಿ ಕಚೇರಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಲಾಗಿದೆ. ಇದರ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುವುದು ಎಂದರು.




