ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ವತಿಯಿಂದ ಪುನಶ್ಚೇತನ ಕಾರ್ಯಗಾರ ಹಾಗೂ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿತ್ತು.
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
ಸಮಾರಂಭದ ಉದ್ಘಾಟನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ್ ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಶಿಕ್ಷಣ ಇಲಾಖೆ ಗ್ರಾಮಾಂತರ ಜಿಲ್ಲೆ (ಪದವಿ ಪೂರ್ವ) ಉಪ ನಿರ್ದೇಶಕ ಡಾ.ಬಾಲಗುರುಮೂರ್ತಿ ವಹಿಸಿದ್ದರು.

ಇದೇ ಸಂದರ್ಭದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜು, ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಡಾ ಎ ಆರ್ ಗೋವಿಂದ ಸ್ವಾಮಿ, ಪ್ರೊ ಕೃಷ್ಣೇಗೌಡ, “ತರಗತಿಯಲ್ಲಿ ಶಿಕ್ಷಕರ ಪಾತ್ರ ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಯ ಉತ್ತೇಜನ” ಕುರಿತು ಕಾರ್ಯಗಾರ ಹಾಗೂ ಉಪನ್ಯಾಸ ನಡೆಸಿದರು.
ಸಮಾರಂಭದಲ್ಲಿ ನಿವೃತ್ತ ಪ್ರಾಂಶುಪಾಲ ರಾಮಕೃಷ್ಣ, ಕೃಷ್ಣಪ್ಪ ಪೀ. ಎಮ್ ನೆಗಳೂರು, ಚಿಕ್ಕಜಪ್ಪ, ಡಾ ಭಾನುಪ್ರಕಾಶ್ ಹಾಗೂ ಪ್ರತಿಯೊಂದು ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಸಂಘದ ಅಧ್ಯಕ್ಷ ದಯಾನಂದ್, ಕಾರ್ಯಾಧ್ಯಕ್ಷ ಪ್ರಮೋದ್ ಕುಲಕರ್ಣಿ, ಕಾರ್ಯದರ್ಶಿ ಗೌರಿಶಂಕರ್ ಚಂದ್ರಮಕಲ ಮುಂತಾದವರು ಉಪಸ್ಥಿತರಿದ್ದರು.




