ಬೆಂಗಳೂರು: ಕನ್ನಡ ವಿಶ್ವವಿದ್ಯಾಲಯಕ್ಕೆ ಕೂಡಲೇ 23 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಬೇಕು ಎಂದು ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಈ ಕುರಿತು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ ಚಂದ್ರು, ಕಳೆದ 32 ವರ್ಷಗಳ ಹಿಂದೆ ಕಲ್ಯಾಣ ಕರ್ನಾಟಕ ಭಾಗವಾದ ಐತಿಹಾಸಿಕ ಸ್ಥಳ ಹಂಪಿಯಲ್ಲಿ ಕನ್ನಡ ನಾಡು, ನುಡಿ, ಸಂಸ್ಕೃತಿಗೆ ಸಂಬಂಧಿಸಿದ ಸಂಶೋಧನೆಗೆ ಮೀಸಲಾದ ವಿಶ್ವವಿದ್ಯಾಲಯವಾಗಿ ಸ್ಥಾಪನೆಯಾಗಿತ್ತು. ಇತ್ತೀಚಿನ ವರ್ಷಗಳಲ್ಲಿ ಕನ್ನಡ ವಿಶ್ವವಿದ್ಯಾಲಯಕ್ಕೆ ಸರ್ಕಾರದಿಂದ ಸೂಕ್ತ ಅನುದಾನವಿಲ್ಲದೆ ಸಂಶೋಧನಾ ಯೋಜನೆಗಳನ್ನು ನಿರ್ವಹಿಸಲು, ಇವುಗಳನ್ನು ಪ್ರಕಟಿಸಲು ಮತ್ತು ವಿಶ್ವವಿದ್ಯಾಲಯದ ಸಿಬ್ಬಂದಿಗಳ ವೇತನ ಹಾಗೂ ದಿನನಿತ್ಯದ ನಿರ್ವಹಣಾ ಕಾರ್ಯಗಳಿಗೆ ಬಹಳಷ್ಟು ತೊಡಕುಂಟಾಗಿರುವುದರಿಂದ ಕೂಡಲೇ 23 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಬೇಕು ಆಗ್ರಹಿಸಿದ್ದಾರೆ.
ಸಿದ್ದರಾಮಯ್ಯನವರು ತಮ್ಮ ರಾಜಕೀಯ ಜೀವನವನ್ನು ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿ ಪಾದರ್ಪಣೆ ಮಾಡಿ ಇಂದು ಮುಖ್ಯಮಂತ್ರಿಗಳಾಗಿರುವ ಸಂದರ್ಭದಲ್ಲಿ ಕನ್ನಡದ ಕೈಂಕರ್ಯಕ್ಕಾಗಿಯೇ ಮೀಸಲಿಟ್ಟಿರುವ ಕನ್ನಡ ವಿಶ್ವವಿದ್ಯಾನಿಲಯಕ್ಕೆ ಕುಲಪತಿಗಳು ಪತ್ರ ಬರೆದು ನಂತರ ಸ್ವತಹ ಮುಖ್ಯಮಂತ್ರಿಗಳೇ ಅನುದಾನ ಬಿಡುಗಡೆ ಮಾಡಲು ಆದೇಶ ಮಾಡಿದ್ದರೂ ಸಹ ಆರ್ಥಿಕ ಇಲಾಖೆಯಿಂದ ಐದು ತಿಂಗಳಾದರೂ ಅನುದಾನ ಬಿಡುಗಡೆ ಮಾಡಲು ಮೀನಮೇಷ ಎಣಿಸುತ್ತಿರುವುದು ನಿಜಕ್ಕೂ ಬೇಸರದ ಸಂಗತಿ ಎಂದಿದ್ದಾರೆ.
ಇದರಲ್ಲಿ ಎಸ್ಸಿ ಎಸ್ ಪಿ / ಟಿ ಎಸ್ ಪಿ ಯೋಜನೆ ಹಾಗೂ ಗಿರಿಜನ ಉಪ ಯೋಜನೆಗೆ ಮೀಸಲಿಟ್ಟಿರುವ ಹಣವೂ ಸೇರಿದೆ ಎಂದು ಅವರು ಗಮನ ಸೆಳೆದಿದ್ದಾರೆ.
ಕೂಡಲೇ ಅನುದಾನ ಬಿಡುಗಡೆ ಮಾಡದಿದ್ದಲ್ಲಿ ಕನ್ನಡ ಕಟ್ಟಾಳುವಾಗಿ ಹೋರಾಟದ ಹಾದಿಯನ್ನು ಹಿಡಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.




