ಬೆಂಗಳೂರು: ಕರ್ನಾಟಕ ಲಾನ್ ಟೆನಿಸ್ ಅಸೋಸಿಯೇಷನ್ ನಲ್ಲಿ ಬಿಬಿಎಂಪಿ ಕಾರ್ಯನಿರತ ಗುತ್ತಿಗೆದಾರರ ಸಂಘದ ನೂತನ ವರ್ಷದ ಕಂಟ್ರಾಕ್ಟರ್ಸ್ ಡೈರಿ-2025ರ ಬಿಡುಗಡೆ ಸಮಾರಂಭ ನಡೆಯಿತು.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಗನ್ನಾಥ ಶೇಗಜಿ, ಪ್ರಧಾನ ಕಾರ್ಯದರ್ಶಿ ಜಿ.ಎಂ.ರವೀಂದ್ರ, ಉಪಾಧ್ಯಕ್ಷ ಕೃಷ್ಣೆಗೌಡ, ಸಂಘದ ದಿನೇಶ್ ,ಬಿಬಿಎಂಪಿ ಕಾರ್ಯನಿರತ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ.ಮಂಜುನಾಥ್ ಕಂಟ್ರಾಕ್ಟರ್ಸ್ ಡೈರಿ-2025 ಅನ್ನು ಉದ್ಘಾಟನೆ ಮಾಡಿದರು.
ತುಷಾರ್ ಗಿರಿನಾಥ್ ಮಾತನಾಡಿ, ಬಿಬಿಎಂಪಿ ಮತ್ತು ಗುತ್ತಿಗೆದಾರರು ಸಮನ್ವಯತೆ ಕೆಲಸ ಮಾಡಬೇಕು. ಇಂದು ಬೆಂಗಳೂರುನಗರ ವಿಶ್ವಮಾನ್ಯತೆ ಗಳಿಸಲು ಗುತ್ತಿಗೆದಾರರು ಕಾರಣ. ಗುತ್ತಿಗೆದಾರರಿಗೆ ಬಿಲ್ಲು ಬಿಡುಗಡೆಯಲ್ಲಿ ಸೀನಿಯಾರಿಟಿ ಪಾಲಿಸಲಾಗಿದೆ. ಯಾವುದೇ ಗುತ್ತಿಗೆದಾರನಿಗೆ ಅನ್ಯಾಯವಾಗುವುದಿಲ್ಲ. ಬೆಂಗಳೂರು ನಗರದಲ್ಲಿ 1.40 ಕೋಟಿ ಜನಸಂಖ್ಯೆ ಇದೆ. ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡಬೇಕು. ಗುತ್ತಿಗೆದಾರರ ಸಹಕಾರದಿಂದ ನಗರದ ನಾಗರಿಕರಿಗೆ ಉತ್ತಮ ಮೂಲಭೂತ ಸೌಲಭ್ಯ ಕಲ್ಪಿಸಲಾಗುವುದು ಎಂದರು.
ಉಪಾಧ್ಯಕ್ಷ ಜಿ.ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಟಿ.ವೆಂಕಟೇಶ್, ಖಜಾಂಚಿ ಕೆ.ಪ್ರಕಾಶ್ ಬಾಬು, ತಾಂತ್ರಿಕ ಸಲಹೆಗಾರ ಎನ್.ಮಂಜುನಾಥ್ ರವರು ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.




