Justice delayed is justice denied ನೆನಪಿಡಿ: ಸಿದ್ದರಾಮಯ್ಯ

11 months ago

ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ AC, DC, ತಹಶೀಲ್ದಾರ್ ಕೋರ್ಟ್ ಗಳಲ್ಲಿ ಬಾಕಿ ಕೇಸುಗಳು ಶೀರ್ಘ ವಿಲೇವಾರಿ ಆಗುತ್ತಿರುವುದಕ್ಕೆ ಮೆಚ್ಚುಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ, ಬೆಂಗಳೂರು ಗ್ರಾಮಾಂತರ ಮತ್ತು ಎರಡು ಜಿಲ್ಲೆಗಳಲ್ಲಿ ಮಾತ್ರ AC ಮತ್ತು DC ಕೋರ್ಟ್ ಗಳಲ್ಲಿ ಐದು ವರ್ಷಕ್ಕೂ ಹಳೆಯದಾದ ಪ್ರಕರಣಗಳು ಬಾಕಿ ಇರುವುದಕ್ಕೆ ಅಸಮಾಧಾನಗೊಂಡ ಮುಖ್ಯಮಂತ್ರಿಗಳು ತರಾಟೆಗೆ ತೆಗೆದುಕೊಂಡರು.

Justice delayed is justice denied ಎನ್ನುವ ಮಾತನ್ನು ನೆನಪಿಡಿ. ಇದನ್ನು ಸಹಿಸಲು ಸಾಧ್ಯವಿಲ್ಲ. ಉಳಿದ ಜಿಲ್ಲೆಗಳಲ್ಲಿ ಪ್ರಗತಿ ಕಾಣುವಾಗ ಕೆಲವು ಮಾತ್ರ ಆಗುತ್ತಿಲ್ಲ‌ ಎಂದರೆ ಸಹಿಸಲು ಸಾಧ್ಯವಿಲ್ಲ ಎಂದರು.

ಈ ಬಗ್ಗೆ ನೋಟಿಸ್ ನೀಡಿ ಕ್ರಮ ಕೈಗೊಳ್ಳಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಸೂಚಿಸಿದರು.

ಅಗತ್ಯವಿದ್ದರೆ ಹೇಳಿ ಹೆಚ್ಚುವರಿ AC, DC ಗಳನ್ನು ಕೊಡಬಹುದು ಎಂದರು.

Leave a Reply