ಬೆಂಗಳೂರು: ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ಕಾಂಗ್ರೆಸ್ ನಾಯಕರು ಪದೇ ಪದೇ ಅಪಮಾನ ಮಾಡ್ತಿದ್ದಾರೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ದಲಿತರ ವಿರೋಧಿ. ವಯನಾಡ್ನಲ್ಲಿ ಪ್ರಿಯಾಂಕ್ ವಾದ್ರಾ ನಾಮಪತ್ರ ಸಲ್ಲಿಕೆ ವೇಳೆ ಮಲ್ಲಿಕಾರ್ಜುನ ಖರ್ಗೆಯವರನ್ನು ಬಾಗಿಲ ಬಳಿ ನಿಲ್ಲಿಸಿದ್ದರು. (ಈ ಆರೋಪ ಸುಳ್ಳು) ಮೊನ್ನೆ ಬೆಳಗಾವಿಯಲ್ಲಿ ನಡೆದ ಎಐಸಿಸಿ ಅಧಿವೇಶನಕ್ಕೆ ರಾಹುಲ್ ಗಾಂಧಿ ಬಂದ ಸಮಯದಲ್ಲಿ ಡಿ.ಕೆ.ಶಿವಕುಮಾರ್ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನ ತಳ್ಳೋ ಕೆಲಸ ಮಾಡಿದ್ದಾರೆ. ಇದನ್ನು ನೋಡಿದ್ರೆ ಕಾಂಗ್ರೆಸ್ ದಲಿತ ವಿರೋಧಿಗಳು ಎಂದು ಗೊತ್ತಾಗುತ್ತದೆ ಎಂದು ವಾಗ್ದಾಳಿ ನಡೆಸಿದರು.
ಖರ್ಗೆ ಅವರನ್ನು ಕಾಂಗ್ರೆಸ್ ಸಿಎಂ ಮಾಡಲಿಲ್ಲ. ಯಾಕೆ ಮಾಡಲಿಲ್ಲ? ದಲಿತರನ್ನ ಅಪಮಾನ ಮಾಡೋದು ಕಾಂಗ್ರೆಸ್ ಗುಣ ಎಂದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿ, ಕಾಂಗ್ರೆಸ್ ಅಂಬೇಡ್ಕರ್ಗೆ ಗೌರವ ಕೊಡೋ ಕೆಲಸ ಮಾಡಿಲ್ಲ. ಜಗಜೀವನರಾಮ್ ಸೇರಿ ಎಲ್ಲಾ ನಾಯಕರಿಗೆ ಅಪಮಾನ ಮಾಡಿದ್ದಾರೆ ಎಂದರು.
ಕೆಲ ದಲಿತ ಸಂಘಟನೆಗಳು ಅಮಿತ್ ಶಾ ವಿರುದ್ಧ ಪ್ರತಿಭಟನೆ ಮಾಡ್ತಿದ್ದಾರೆ. ಅಮಿತ್ ಶಾ ಎಲ್ಲೂ ಕೂಡಾ ಅಂಬೇಡ್ಕರ್ಗೆ ಅಪಮಾನ ಮಾಡಿಲ್ಲ. ಅಪಮಾನ ಮಾಡಿದ್ದು ಕಾಂಗ್ರೆಸ್, ಇದನ್ನ ಅಮಿತ್ ಶಾ ಹೇಳಿದ್ದಕ್ಕೆ ಅವರ ವಿರುದ್ಧ ಹೇಳಿಕೆ ತಿರುಚಿ ಆರೋಪ ಮಾಡ್ತಿದ್ದಾರೆ. ಹೀಗಿದ್ದರೂ ಯಾಕೆ ನಮ್ಮ ಬಂಧುಗಳು ಪ್ರತಿಭಟನೆ ಮಾಡ್ತಿದ್ದಾರೆ ಎಂಬುದು ಗೊತ್ತಿಲ್ಲ ಎಂದರು.
ದಲಿತ ಸಂಘಟನೆಗಳು ಅರ್ಥ ಮಾಡಿಕೊಳ್ಳಬೇಕು. ಕಾಂಗ್ರೆಸ್ ಪಾಪದ ಕೊಡ ತುಂಬಿದೆ. ಕಾಂಗ್ರೆಸ್ನ ಎಲ್ಲಾ ಸಂಭ್ರಮದ ದಿನಗಳು ಸಂತಾಪದ ದಿನಗಳು ಆಗಲಿವೆ. ಅರ್ಥ ಮಾಡಿಕೊಳ್ಳಿ, ಅಂಬೇಡ್ಕರ್ಗೆ ಬಿಜೆಪಿ ಅಪಮಾನ ಮಾಡಿಲ್ಲ. ಮೀಸಲಾತಿ ಜಾಸ್ತಿ ಮಾಡಿದ್ದು ಬಿಜೆಪಿ. ಇದನ್ನು ದಲಿತ ಬಂಧುಗಳು ಅರ್ಥ ಮಾಡಿಕೊಳ್ಳಬೇಕು ಎಂದು ಕಾಂಗ್ರೆಸ್ ಮತ್ತು ಕೆಲವು ದಲಿತ ಸಂಘಟನೆಗಳ ವಿರುದ್ಧ ವಾಗ್ದಾಳಿ ನಡೆಸಿದರು.




