ಕುಡಿಯುವ ನೀರಿನ ಘಟಕಗಳಿಗೆ ಪುನೀತ್ ರಾಜ್ ಕುಮಾರ್ ಹೆಸರು ನಾಮಕರಣಕ್ಕೆ ಮನವಿ

2 years ago

#Request #naming #PuneethRajkumar #drinking #water #units

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾವಿರಾರು ಕುಡಿಯುವ ನೀರಿನ ಘಟಕಗಳ ಕಾರ್ಯನಿರ್ವಹಿಸುತ್ತಿವೆ. ನಾಡು ಕಂಡ ಶೇಷ್ಠ ಕಲಾವಿದ, ಹೃದಯ ಶ್ರೀಮಂತ, ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಅವರ ಸವಿನೆನಪಿನಲ್ಲಿ ಪುನೀತ್ ರಾಜ್ ಕುಮಾರ್ ಶುದ್ಧ ಕುಡಿಯುವ ನೀರಿನ ಘಟಕ ಎಂದು ಈ ಯೋಜನೆಗೆ ನಾಮಕರಣ ಮಾಡಬೇಕು ಎಂದು ಮಾಹಿತಿ ಹಕ್ಕು ಅಧ್ಯಯನ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಎಸ್.ಅಮರೇಶ್ (ಅಂಬರೀಶ್) ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದರು. ಈ ಮನವಿ ಮೇರೆಗೆ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಧಿಕಾರಿ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದ್ದಾರೆ ಎಂದು ವರದಿಯಾಗಿದೆ.

ಈ ವಿಷಯದ ಕುರಿತು ಪ್ರತಿಕ್ರಿಯೆ ನೀಡಿರುವ ಎಸ್.ಅಮರೇಶ್, ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಅವರು ಬಾಲ್ಯದಿಂದಲೇ ಕಲಾ ಸೇವೆ ಮಾಡುತ್ತಾ ಬಂದಿದ್ದಾರೆ. ಸಮಾಜಕ್ಕೆ ಉತ್ತಮ ಸಂದೇಶ ಸಾರುವ ಚಿತ್ರಗಳಲ್ಲಿಅಭಿನಯಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದರು.

ಭಾರತದ ಚಲನಚಿತ್ರರಂಗದ ಅದ್ಬುತ ಕಲಾಪ್ರತಿಭೆ ಎಂಬ ಖ್ಯಾತಿ ಪಡೆದಿದ್ದಾರೆ. ಸಾವಿರಾರು ಮಕ್ಕಳಿಗೆ ಉಚಿತ ವಸತಿ ಶಿಕ್ಷಣ, ಗೋಸೇವೆ ಮತ್ತು ಹಲವಾರು ಸಾಮಾಜಿಕ ಮುಖಿ ಕಾರ್ಯಗಳನ್ನು ಮಾಡಿದ್ದಾರೆ. ಡಾ.ಪುನೀತ್ ರಾಜ್ ಕುಮಾರ್ ಅವರ ಜೀವನ ಆದರ್ಶಗಳು ನಮಗೆ ದಾರಿದೀಪವಾಗಿದೆ ಎಂದರು.

ಪುನೀತ್ ಅವರ ಹೆಸರು ಚಿರಸ್ಥಾಯಿಯಾಗಿ ಉಳಿಯಲಿ ಎಂಬ ಉದ್ದೇಶದಿಂದ ಶುದ್ಧ ಕುಡಿಯುವ ನೀರಿನ ಘಟಕದ ಯೋಜನೆಗೆ ಮತ್ತು ಘಟಕಗಳ ಮೇಲೆ ಡಾ.ಪುನೀತ್ ರಾಜ್ ಕುಮಾರ್ ಶುದ್ಧ ಕುಡಿಯುವ ನೀರಿನ ಘಟಕ ಎಂದು ನಾಮಕರಣ ಮಾಡಬೇಕು ಎಂದು ಮನವಿ ಸಲ್ಲಿಸಲಾಗಿದೆ . ಕೊಡಲೇ ಕ್ರಮ ವಹಿಸಬೇಕು ಎಂದು ಮುಖ್ಯ ಆಯುಕ್ತರಿಗೆ ವಿನಂತಿಸಲಾಗುವುದು ಎಂದು ಹೇಳಿದರು.

Leave a Reply