ಬೆಂಗಳೂರು: ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ನ ಅಕ್ರಮ ಗಣಿಗಾರಿಕೆ ಆರೋಪ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ವಿಶೇಷ ತನಿಖಾ ತಂಡ (ಎಸ್ ಐಟಿ) ರಾಜ್ಯಪಾಲರ ಅನುಮತಿ ಕೇಳಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಕೇಸ್‌ನಲ್ಲಿ ಹೆಚ್‌ಡಿಕೆ ವಿರುದ್ಧ ಪ್ರಾಸಿಕ್ಯೂಷನ್‌ಗೆ ಈ ಹಿಂದೆಯೇ ಎಸ್ ಐಟಿ ಅಧಿಕಾರಿಗಳು ರಾಜ್ಯಪಾಲರ ಬಳಿ ಅನುಮತಿ ಕೇಳಿದ್ದರು.
ಈ ವೇಳೆ ರಾಜ್ಯಪಾಲರು ದೋಷಾರೋಪ ಪಟ್ಟಿಯನ್ನು ಇಂಗ್ಲಿಷ್‌ಗೆ ಅನುವಾದ ಮಾಡಿ ಸಲ್ಲಿಸುವಂತೆ ಸೂಚಿಸಿದ್ದರು. ಅದರಂತೆ ಇದೀಗ ದೋಷಾರೋಪ ಪಟ್ಟಿಯನ್ನು ಸಂಪೂರ್ಣವಾಗಿ ಇಂಗ್ಲಿಷ್ ಗೆ ಅನುವಾದ ಮಾಡಲಾಗಿದೆ.
ಸುಮಾರು 4,500 ಪುಟಗಳ ದೋಷಾರೋಪ ಪಟ್ಟಿ ಅನುವಾದ ಮಾಡಿರುವ ಎಸ್‌ಐಟಿ ಅಧಿಕಾರಿಗಳು ಅದನ್ನು ರಾಜಭವನಕ್ಕೆ ತಲುಪಿಸಿದ್ದಾರೆ. ಕುಮಾರಸ್ವಾಮಿ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿದ್ದಾರೆ.




