ಬೆಂಗಳೂರು: ರಾಜ್ಯದಲ್ಲಿ ರಸ್ತೆ ಸಂಪರ್ಕ ಜಾಲ ಸುಧಾರಿಸುವ ದೃಷ್ಟಿಯಿಂದ 5225ಕಿ.ಮೀ. ಉದ್ದದ 39 ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಿಯೋಗ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಿದೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ರಾಜ್ಯದ ಒಟ್ಟು 39 ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಗಳು ಎಂದು ಘೋಷಿಸಲು ತಾತ್ವಿಕ ತೀರ್ಮಾನ ಕೈಗೊಳ್ಳಲಾಗಿದೆ. ಆದರೆ ಇಲ್ಲಿವರೆಗೆ ಅವುಗಳನ್ನು ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಈ ಬಗ್ಗೆ ಗಮನ ಹರಿಸುವಂತೆ ಕೋರಿದರು.
ಬೆಳಗಾವಿ – ಹುನಗುಂದ – ರಾಯಚೂರು (NH748A), ಬೆಂಗಳೂರು – ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿ, ಸೂರತ್ – ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿ, ಬೆಂಗಳೂರು ನಗರದ ಉಪನಗರ ವರ್ತುಲ ರಸ್ತೆ ಗ್ರೀನ್ಫೀಲ್ಡ್ ಕಾರಿಡಾರ್ಗಳ ಅಭಿವೃದ್ಧಿಗೆ ಅನುಮೋದನೆ ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಕೇಂದ್ರ ಸರ್ಕಾರದಿಂದ ಬರಬೇಕಾಗಿರುವ ಇನ್ನಷ್ಟು ಪ್ರಮುಖ ವಿಚಾರಗಳ ಕುರಿತು ಕೇಂದ್ರ ಸಚಿವರ ಗಮನ ಸೆಳೆದರು.
ಈಗಾಗಲೇ ತಾತ್ವಿಕ ಅನುಮೋದನೆ ದೊರೆತಿರುವ ಕೇರಳದ ಕಲ್ಪೆಟ್ಟದಿಂದ ಮಾನಂದವಾಡಿ, ಹೆಚ್.ಡಿ.ಕೋಟೆ, ಜಯಪುರ ಮೂಲಕ ಮೈಸೂರನ್ನು ಸಂಪರ್ಕಿಸುವ 90 ಕಿ.ಮೀ. ಹೆದ್ದಾರಿ, ಮೈಸೂರಿನಿಂದ ಬನ್ನೂರು ಮೂಲಕ ಮಳವಳ್ಳಿಯನ್ನು ಸಂಪರ್ಕಿಸುವ 45 ಕಿ.ಮೀ. ಹೆದ್ದಾರಿ ಹಾಗೂ ಬೆಳಗಾವಿ ಜಿಲ್ಲೆಯ ಸಂಕೇಶ್ವರದಿಂದ ಗೋಕಾಕ – ಯರಗಟ್ಟಿ – ಮಮುನವಳ್ಳಿ ಮೂಲಕ ನರಗುಂದವನ್ನು ಸಂಪರ್ಕಿಸುವ 127 ಕಿ.ಮೀ. ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಿಸಲು ಸಿದ್ದರಾಮಯ್ಯ ಮನವಿ ಮಾಡಿದರು.
ಗಡ್ಕರಿ ಅವರಿಗೆ ಸಲ್ಲಿಸಿದ ಮನವಿಯ ಮುಖ್ಯಾಂಶಗಳು:
1. ಬೆಳಗಾವಿ ಜಿಲ್ಲೆಯ ಗೋಕಾಕ್ ಜಲಪಾತದಲ್ಲಿ ಕೇಬಲ್ ಕಾರ್ ಸೌಲಭ್ಯ ಕಲ್ಪಿಸುವ ಯೋಜನೆ
2. ಕಿತ್ತೂರು ಪಟ್ಟಣದಿಂದ ಬೈಲಹೊಂಗಲವನ್ನು ಸಂಪರ್ಕಿಸುವ ರಸ್ತೆಯ ಸುಧಾರಣೆ
3. ಕಲಬುರಗಿ ಮತ್ತು ರಾಯಚೂರಿನಲ್ಲಿ ಬೈಪಾಸ್ ನಿರ್ಮಾಣ
4. NH-373 ರ ಬೇಲೂರು ಚಿಕ್ಕಮಗಳೂರು ವಿಭಾಗದಲ್ಲಿ ಚತುಷ್ಪಧ ನಿರ್ಮಾಣ
5. ಚಳ್ಳಕೆರೆ ಪಟ್ಟಣ ವ್ಯಾಪ್ತಿಯಲ್ಲಿ NH-150A ಯ ಒಂದು ಬಾರಿ ಸುಧಾರಣೆ
6. ರಾಷ್ಟ್ರೀಯ ಹೆದ್ದಾರಿ NH-766 ರ 106 ಕಿ.ಮೀ. ರಸ್ತೆಯನ್ನು ಚತುಷ್ಪಥ, ಆರು ಪಥದ ಹೆದ್ದಾರಿಯಾಗಿ ಅಭಿವೃದ್ಧಿಪಡಿಸುವುದು
7. ದಿನಕ್ಕೆ 10000 ಪಿಸಿಯು ವಾಹನ ದಟ್ಟಣೆ ಹೊಂದಿರುವ ರಾಜ್ಯ ಹೆದ್ದಾರಿಗಳನ್ನು ಉನ್ನತೀಕರಿಸಲು ಮನವಿ ಮಾಡಲಾಯಿತು.
8. ಶಿರಾಡಿ ಘಾಟಿಯಲ್ಲಿ ಮಾರನಹಳ್ಳಿಯಿಂದ ಅಡ್ಡಹೊಳೆ ನಡುವೆ ಟನೆಲ್ ನಿರ್ಮಾಣದ ಮೂಲಕ ಮಂಗಳೂರು ಬಂದರು ಸಂಪರ್ಕ ಇನ್ನಷ್ಟು ಸುಗಮಗೊಳಿಸುವುದು.
9. ಮೈಸೂರು ನಗರದ ಮಣಿಪಾಲ್ ಆಸ್ಪತ್ರೆ ಜಂಕ್ಷನ್ (ಕೊಲಂಬಿಯ ಏಷ್ಯಾ ಆಸ್ಪತ್ರೆ) ನಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಅನುಮೋದನೆ.
10. ಮೈಸೂರು ರಿಂಗ್ ರಸ್ತೆಯಲ್ಲಿ NH-275K ನಲ್ಲಿ 9 ಗ್ರೇಡ್ ಸೆಪರೇಟರುಗಳ ನಿರ್ಮಾಣಕ್ಕೆ ಅನುಮೋದನೆ



