ಬಳ್ಳಾರಿ: ಸಿರುಗುಪ್ಪ ಹಾಗೂ ಕಂಪ್ಲಿ ಪಟ್ಟಣದ ವಿವಿಧ ಸ್ಥಳಗಳಲ್ಲಿನ ಗ್ಯಾರೇಜ್, ಮೆಕ್ಯಾನಿಕ್ ಶಾಪ್, ಕಟ್ಟಡ ನಿರ್ಮಾಣ ಕೆಲಸ, ಬೇಕರಿ ಇತ್ಯಾದಿ ಉದ್ದಿಮೆಗಳ ಮೇಲೆ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಟಾಸ್ಕ್ ಫೋರ್ಸ್ ಸಮಿತಿಯು ದಾಳಿ ನಡೆಸಿ 06 ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ರಕ್ಷಿಸಲಾಗಿದೆ.
- ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ: ಡಾ. ಎ ಆರ್ ಗೋವಿಂದಸ್ವಾಮಿ
- ಸಂವಿಧಾನ ಪೀಠಿಕೆ ದೇಶದ ಆತ್ಮವಿದ್ದಂತೆ: ಆದಿತ್ಯ ಚಟರ್ಜಿ
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
ಮಕ್ಕಳ ಹೇಳಿಕೆಗಳನ್ನು ಸ್ಥಳದಲ್ಲಿ ಪಡೆದುಕೊಂಡು ಎಲ್ಲಾ ಮಕ್ಕಳನ್ನು ಪುನರ್ವಸತಿಗಾಗಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಗಿದೆ. ಎಲ್ಲಾ ಉದ್ದಿಮೆಗಳ ಮಾಲೀಕರಿಗೆ ಕರಪತ್ರ ಹಾಗೂ ಪೋಸ್ಟರ್‌ಗಳನ್ನು ನೀಡಿ ಜಾಗೃತಿ ಮೂಡಿಸಲಾಗಿದೆ.
ಜಿಲ್ಲಾಧಿಕಾರಿಯವರ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಟಾಸ್ಕ್ ಪೋರ್ಸ್ ಸಮಿತಿ ಅಧ್ಯಕ್ಷರಾದ ತಹಶೀಲ್ದಾರರ ನೇತೃತ್ವದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಸಿ ಈ ದಾಳಿ ಕೈಗೊಳ್ಳಲಾಗಿದೆ.
ಟಾಸ್ಕ್ ಪೋರ್ಸ್ ಸಮಿತಿಯಲ್ಲಿ ಕಾರ್ಮಿಕ ನಿರೀಕ್ಷಕರಾದ ತಿರುಮಲೇಶ್, ಶಿವಶಂಕರ್, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮೌನೇಶ್, ಗ್ರೇಡ್-2 ತಹಶೀಲ್ದಾರ ಬಸವರಾಜ್, ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕ ಬಸವರಾಜ್, ಪೋಲಿಸ್ ಸಬ್ ಇನ್ಸ್ಪೆಕ್ಟರ್ ಅವಿನಾಶ್ ಕಾಂಬ್ಳೆ, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲನ ಗೌಡ, ಮಕ್ಕಳ ಸಹಾಯವಾಣಿ ಸಿಬ್ಬಂದಿ ಚಂದ್ರಕಲಾ, ಕಿರಣ್ ಕುಮಾರ್, ರೀಚ್ ಸಂಸ್ಥೆಯ ಸಂಯೋಜಿಕಿ ಲಕ್ಷ್ಮೀದೇವಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.


