ಬೆಂಗಳೂರು: ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಿದ ರಾಜ್ಯ ಸರ್ಕಾರ ಇದೀಗ ವಸತಿ ಯೋಜನೆಯಲ್ಲೂ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳಕ್ಕೆ ಮಹತ್ವ ನಿರ್ಧಾರವನ್ನು ಕೈಗೆತ್ತಿಕೊಂಡಿದೆ. ಸಚಿವ ಸಂಪುಟ ಸಭೆಯಲ್ಲಿ ವಸತಿ ಯೋಜನೆಯಲ್ಲಿ ಅಲ್ಪ ಸಂಖ್ಯಾತರಿಗೆ ಈಗಿರುವ ಶೇ.10ರ ಮೀಸಲಾತಿಯನ್ನು ಶೇ.15ಕ್ಕೆ ಏರಿಸಲು ತೀರ್ಮಾನ ಮಾಡಲಾಗಿದೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಸಚಿವ ಸಂಪುಟ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಹೆಚ್ ಕೆ ಪಾಟೀಲ್, ವಸತಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುವ ವಿವಿಧ ಯೋಜನೆ ಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಹೆಚ್ಚಳ ಮಾಡಲಾಗಿದ್ದು, ಶೇಕಡಾ 10ರಿಂದ ಶೇ.15ಕ್ಕೆ ಹೆಚ್ಚಿಸಲು ಸಂಪುಟ ಅನುಮೋದನೆ ನೀಡಿದೆ ಎಂದರು.
ಸಾಚಾರ್ ಕಮಿಟಿ ವರದಿಯನ್ನೂ ಕೂಡ ಈಗ ಕೇಂದ್ರ ಪರಿಗಣಿಸುತ್ತಿದೆ. ಕೇಂದ್ರದ ಸೂಚನೆಗಳನ್ನು ಗಮನಿಸಿ ಸಾಮಾಜಿಕ ನ್ಯಾಯದ ಪಾಲನೆ ಮಾಡುತ್ತಿದ್ದೇವೆ. ನಿಯಮಗಳಿಗೆ ಕ್ಯಾಬಿನೆಟ್ ಅನುಮೋದನೆ ಸಾಕು. ಇದು ಎಲ್ಲ ಅಲ್ಪಸಂಖ್ಯಾತರಿಗೂ ಅನ್ವಯವಾಗುತ್ತದೆ. ಮುಸ್ಲಿಂ, ಜೈನರು, ಕ್ರಿಶ್ಚಿಯನ್ ಎಲ್ಲರೂ ಕೂಡ ಇದರಲ್ಲಿ ಒಳಗೊಳ್ಳುತ್ತಾರೆ. ಇದಕ್ಕೆ ಬೇಕಾದ ಹಲವು ಅಧ್ಯಯನ ವರದಿಗಳೂ ಕೂಡ ಇವೆ ಎಂದರು.
ಬಡವರಿಗೆ ಮನೆ ಮಾಡಿಕೊಡುವುದರಲ್ಲಿ ರಾಜಕೀಯ ವಾಸನೆ ಹುಡುಕುವವರಿಗೆ ನಾವು ಉತ್ತರ ಕೊಡಲ್ಲ. ವಸತಿ ಹೀನರಿಗೆ ಹೆಚ್ಚಿನ ಸೌಲಭ್ಯಗಳನ್ನು ಕೊಡಬೇಕು ಎಂಬುದು ಸರ್ಕಾರದ ಉದ್ದೇಶ ಎಂದು ಎಂದರು.
ಈ ಕುರಿತು ಸ್ಪಷ್ಟನೆ ನೀಡಿರುವ ಡಿಸಿಎಂ ಡಿ ಕೆ ಶಿವಕುಮಾರ್, ನಗರ ಪ್ರದೇಶದಲ್ಲಿ ಬಹಳಷ್ಟು ಜನರು ಅಲ್ಪಸಂಖ್ಯಾತರಿದ್ದಾರೆ. ಅಲ್ಲಿ ಅನೇಕ ಕಡೆಗಳಲ್ಲಿ ಮನೆಗಳು ಖಾಲಿ ಇವೆ. ಎಷ್ಟೋ ಕಡೆ ಕಟ್ಟಿರೋ ಬಿಲ್ಡಿಂಗ್ ಖಾಲಿ ಇವೆ. ಅಲ್ಪಸಂಖ್ಯಾತರ ಜನಸಂಖ್ಯೆ ಕೂಡ ಹೆಚ್ಚಾಗುತ್ತಲೇ ಇದೆ. ಅಲ್ಪಸಂಖ್ಯಾತರಿಗೆ ಅವಕಾಶ ಕೊಡಬೇಕು. ಹೀಗಾಗಿ ವಸತಿ ಯೋಜನೆಯ ಮೀಸಲಾತಿ ಪ್ರಮಾಣ ಶೇಕಡಾ 10ರಿಂದ 15 ಪರ್ಸೆಂಟ್ ಏರಿಕೆ ಮಾಡಲಾಗುತ್ತಿದೆ. ನಾವು ಬಡವರಿಗೆ ಸಹಾಯ ಮಾಡಲು ಮುಂದಾಗಿದ್ದೇವೆ ಎಂದರು.
ಮಂಡ್ಯದಲ್ಲಿಯೂ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಆದರೆ ಅಲ್ಲಿಗೆ ಯಾರು ಹೋಗದೇ ಖಾಲಿ ಬಿದ್ದಿವೆ. ಈ ಮನೆಗಳಿಗೆ ಹೋಗಲು ಅಲ್ಪಸಂಖ್ಯಾತರು ಮುಂದಾಗಿದ್ದಾರೆ. ಹೀಗಾಗಿ ಸರ್ಕಾರ ಈ ತೀರ್ಮಾನ ಮಾಡಿದೆ ಎಂದರು
ಯಾರು ಏನಾದರೂ ಹೇಳಿಕೊಳ್ಳಲಿ. ನಾವು ಬಡ ವರ್ಗದ ಜನರಿಗೆ ನೆರವು ನೀಡುತ್ತಿದ್ದೇವೆ. ಈ ಮನೆಗಳಿಗೆ ಯಾರೂ ಅರ್ಜಿ ಹಾಕದೇ ಇದ್ದಾಗ ನಾವು ಏನು ಮಾಡಬೇಕು? ಮನೆಯನ್ನು ಹಾಗೇ ಖಾಲಿ ಬಿಡಬೇಕೇ? ಎಂದರು.




